ನವದೆಹಲಿ: ಪರ-ವಿರೋಧಗಳಿಗೆ ಗುರಿಯಾಗಿದ್ದ CBSE 12ನೇ ತರಗತಿ ಪರೀಕ್ಷೆ ವಿಚಾರಕ್ಕೆ ಕೊನೆಗೂ ಮುಕ್ತಿ ಸಿಕ್ಕಿದ್ದು ಪರೀಕ್ಷೆಗಳನ್ನು ರದ್ದು ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

CBSE 12ನೇ ತರಗತಿ ಪರೀಕ್ಷೆಗಳನ್ನು ನಡೆಸುವ ವಿಚಾರವಾಗಿ ದೇಶದಾದ್ಯಂತ ದೊಡ್ಡ ಮಟ್ಟದ ಪರ-ವಿರೋಧ ವ್ಯಕ್ತವಾಗಿತ್ತು. ಕೊರೊನಾ ಎರಡನೇ ಅಲೆಯ ಈ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸುವುದು ಉಚಿತವಲ್ಲ ಎಂದು ಹಲವು ರಾಜ್ಯ ಸರ್ಕಾರಗಳು ಹಾಗೂ ವಿರೋಧ ಪಕ್ಷಗಳೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದವು.

ಇಂದು ಪ್ರಧಾನಿ ಮಹತ್ವದ ಸಭೆ ನಡೆಸಿದ್ದು ಉನ್ನತ ಅಧಿಕಾರಿಗಳೊಂದಿಗೆ ಪರೀಕ್ಷೆ ವಿಚಾರವಾಗಿ ಚರ್ಚೆ ನಡೆಸಿದರು. ಸಭೆಯ ನಂತರ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಗಳನ್ನ ರದ್ದು ಮಾಡಿ ಆದೇಶ ಹೊರಡಿಸಿದೆ.

The post CBSE 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದ ಕೇಂದ್ರ ಸರ್ಕಾರ appeared first on News First Kannada.

Source: newsfirstlive.com

Source link