Chennaveera Kanavi: ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಗಂಭೀರ, ಮತ್ತೆ ಶ್ವಾಸಕೋಶದಲ್ಲಿ ಹೆಚ್ಚಾದ ಸೋಂಕು | Senior kannada poet Chennaveera Kanavi health updates Chennaveera Kanavi health critical


Chennaveera Kanavi: ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಗಂಭೀರ, ಮತ್ತೆ ಶ್ವಾಸಕೋಶದಲ್ಲಿ ಹೆಚ್ಚಾದ ಸೋಂಕು

ನಾಡೋಜ ಚೆನ್ನವೀರ ಕಣವಿ

ಧಾರವಾಡ: ನಾಡೋಜ ಚೆನ್ನವೀರ ಕಣವಿ(Chennaveera Kanavi) ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಧಾರವಾಡದ ಎಸ್ಡಿಎಂ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದ್ದು ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಬಿಗಡಾಯಿಸಿರುವುದು ತಿಳಿದು ಬಂದಿದೆ. ವೆಂಟಿಲೇಟರ್ನಲ್ಲಿ ಚಿಕಿತ್ಸೆ ಮುಂದುವರೆದಿದೆ. ಕಣವಿಯವರಿಗೆ ಮತ್ತೆ ಶ್ವಾಸಕೋಶದಲ್ಲಿ ಸೋಂಕು ಹೆಚ್ಚಾಗಿದೆ. ಚೆನ್ನವೀರ ಕಣವಿ ಜ.14ರಂದು ಎಸ್ಡಿಎಂ ಆಸ್ಪತ್ರೆಗೆ ದಾಖಲಾಗಿದ್ರು.

ಅಕ್ಯೂಟ್ ರೆಸ್ಪಿರೇಟರಿ ಡಿಸ್ಟ್ರೆಸ್ ಸಿಂಡ್ರೋಮ್ನಿಂದ (ARDS) ಚೆನ್ನವೀರ ಕಣವಿ ಬಳಲುತ್ತಿದ್ದಾರೆ. ಕಳೆದ 3-4 ವಾರದಿಂದ ಎಸ್ಡಿಎಂ ಆಸ್ಪತ್ರೆಯಲ್ಲಿ ಕಣವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೊದಲು, ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದ ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ, ಈಗ ಮತ್ತೆ ಆರೋಗ್ಯ ಕ್ಷೀಣಿಸುತ್ತಿದೆ. ಕಣವಿಯವರಿಗೆ ಕೊರೊನಾ ಸೋಂಕು ಕೂಡ ದೃಢಪಟ್ಟಿತ್ತು. ಚೆಂಬೆಳಕಿನ ಕವಿ ಎಂದೇ ಖ್ಯಾತಿ ಪಡೆದಿರುವ 93 ವರ್ಷದ ನಾಡೋಜ ಚೆನ್ನವೀರ ಕಣವಿ ಕಳೆದ 3-4 ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡದ ಎಸ್ಡಿಎಂ ಆಸ್ಪತ್ರೆಯ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಚೆನ್ನವೀರ ಕಣವಿ ಆರೋಗ್ಯ ವಿಚಾರಿಸಿದ್ದರು. ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಅವರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಡಾ. ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಕೂಡ ಮಾಡಿದ್ದರು.

TV9 Kannada


Leave a Reply

Your email address will not be published.