Coimbatore Blast: ಕೊಯಮತ್ತೂರು ಕಾರು ಸ್ಫೋಟ ಪ್ರಕರಣಕ್ಕೆ ಉಗ್ರರ ನಂಟು; ಐವರು ಆರೋಪಿಗಳ ಬಂಧನ – Coimbatore Blast: 5 arrested, UAPA invoked as police probe terror links in Coimbatore car blast case


ತಮಿಳುನಾಡಿನ ಕೊಯಮತ್ತೂರಿನ ಕೊಟ್ಟೈ ಈಶ್ವರನ್ ದೇವಸ್ಥಾನದ ಬಳಿ ಕಾರಿನೊಳಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 25 ವರ್ಷದ ವ್ಯಕ್ತಿಯೊಬ್ಬರು ಸುಟ್ಟು ಕರಕಲಾದ ಘಟನೆ ನಡೆದಿತ್ತು.

Coimbatore Blast: ಕೊಯಮತ್ತೂರು ಕಾರು ಸ್ಫೋಟ ಪ್ರಕರಣಕ್ಕೆ ಉಗ್ರರ ನಂಟು; ಐವರು ಆರೋಪಿಗಳ ಬಂಧನ

ಕೊಯಮತ್ತೂರು ಕಾರು ಸ್ಫೋಟ ನಡೆದ ಸ್ಥಳ

ಚೆನ್ನೈ: ತಮಿಳುನಾಡಿನ ಕೊಯಮತ್ತೂರಿನಲ್ಲಿ ಕಾರು ಸ್ಫೋಟ (Coimbatore Car Blast) ಪ್ರಕರಣದಲ್ಲಿ ಬಂಧಿತರಾಗಿರುವ ಐವರು ಆರೋಪಿಗಳನ್ನು 15 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಆರೋಪಿಗಳ ವಿರುದ್ಧ UAPA ಕಾಯ್ದೆಯಡಿ ಕೇಸ್ ದಾಖಲಾಗಿದೆ. ಅಕ್ಟೋಬರ್ 23ರಂದು ಕೊಯಮತ್ತೂರಿನಲ್ಲಿ ಕಾರು ಸ್ಫೋಟಗೊಂಡು ಓರ್ವ ಮೃತಪಟ್ಟಿದ್ದರು. ತಮಿಳುನಾಡಿನ (Tamil Nadu) ಕೊಯಮತ್ತೂರಿನ ಕೊಟ್ಟೈ ಈಶ್ವರನ್ ದೇವಸ್ಥಾನದ ಬಳಿ ಕಾರಿನೊಳಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 25 ವರ್ಷದ ವ್ಯಕ್ತಿಯೊಬ್ಬರು ಸುಟ್ಟು ಕರಕಲಾದ ಘಟನೆ ನಡೆದಿತ್ತು. ಈ ಘಟನೆಯು ಸ್ಥಳದಲ್ಲಿ ಆತಂಕವನ್ನು ಉಂಟುಮಾಡಿದ ನಂತರ ಪೊಲೀಸ್ ತಂಡವು ತಕ್ಷಣವೇ ಸ್ಥಳಕ್ಕೆ ಧಾವಿಸಿತ್ತು. ವ್ಯಕ್ತಿಯ ಸಾವಿನ ತನಿಖೆಯ ಸಂದರ್ಭದಲ್ಲಿ ಪೊಲೀಸರು ಇದರ ಹಿಂದೆ ಭಯೋತ್ಪಾದಕ ಸಂಚನ್ನು ಬಯಲಿಗೆಳೆದ ನಂತರ ಈ ಕಾರು ಸ್ಫೋಟ ಪ್ರಕರಣವು ದೊಡ್ಡ ತಿರುವು ಪಡೆದುಕೊಂಡಿದೆ.

ಮೃತರನ್ನು 25 ವರ್ಷದ ಜಮೇಜಾ ಮುಬಿನ್ ಎಂದು ಗುರುತಿಸಲಾಗಿದ್ದು, ಈ ಹಿಂದೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅವರನ್ನು ವಿಚಾರಣೆ ನಡೆಸಲಾಗಿತ್ತು. ಸಿಲಿಂಡರ್ ಸ್ಫೋಟ ಪ್ರಕರಣದ ತನಿಖೆ ಮುಂದುವರೆದಿದ್ದು, ಪೊಲೀಸರು ಜಮೇಜಾ ಅವರ ಮನೆಯಲ್ಲಿ ಶೋಧ ನಡೆಸಿದಾಗ ಕೆಲವು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ. ಇದಲ್ಲದೆ, ಸ್ಫೋಟದ ದಿನದಂದು ಜಮೇಜಾ ಅವರ ನಿವಾಸದ ಹೊರಗೆ 4 ಜನರು ಗೋಣಿಚೀಲದಲ್ಲಿ ಸುತ್ತಿದ ವಸ್ತುವನ್ನು ಸಾಗಿಸುತ್ತಿರುವುದನ್ನು ತೋರಿಸುವ ಸಿಸಿಟಿವಿ ದೃಶ್ಯಾವಳಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

TV9 Kannada


Leave a Reply

Your email address will not be published.