Covid 19 Karnataka Update: ಕರ್ನಾಟಕದಲ್ಲಿ 41,457 ಮಂದಿಗೆ ಕೊರೊನಾ ಸೋಂಕು, ಕೊವಿಡ್​ನಿಂದ 20 ಜನರು ಸಾವು | Karnataka Coronavirus Numbers Covid Deaths in state on January 18


Covid 19 Karnataka Update: ಕರ್ನಾಟಕದಲ್ಲಿ 41,457 ಮಂದಿಗೆ ಕೊರೊನಾ ಸೋಂಕು, ಕೊವಿಡ್​ನಿಂದ 20 ಜನರು ಸಾವು

ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರ (ಜ.18) 41,457 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 20 ಜನರು ಕೊವಿಡ್​ನಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 2,50,381 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 22.30, ಸೋಂಕಿನಿಂದ ಸಾವನ್ನಪ್ಪುವವರ ಪ್ರಮಾಣ ಶೇ 0.04. ಇಂದು 8353 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 32,88,700 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 29,99,825 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 38,465 ಜನರು ಮೃತಪಟ್ಟಿದ್ದಾರೆ.

ಬೆಂಗಳೂರು ನಗರದಲ್ಲಿ 25,595 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು 4514 ಮಂದಿ ಚೇತರಿಸಿಕೊಂಡಿದ್ದಾರೆ, ಏಳು ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ ನಗರದಲ್ಲಿ 1,78,328 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 16,465 ಜನರು ಸಾವನ್ನಪ್ಪಿದ್ದಾರೆ. ನಗರದಲ್ಲಿ ಈವರೆಗೆ 14,58,349 ಜನರಲ್ಲಿ ಸೋಂಕು ದೃಢಪಟ್ಟಿದ್ದು, 12,63,555 ಜನರು ಚೇತರಿಸಿಕೊಂಡಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು?
ಬಾಗಲಕೋಟೆ 58, ಬಳ್ಳಾರಿ 714, ಬೆಳಗಾವಿ 418, ಬೆಂಗಳೂರು ಗ್ರಾಮಾಂತರ 1116, ಬೆಂಗಳೂರು ನಗರ 25,595, ಬೀದರ್ 235, ಚಾಮರಾಜನಗರ 198, ಚಿಕ್ಕಬಳ್ಳಾಪುರ 358, ಚಿಕ್ಕಮಗಳೂರು 362, ಚಿತ್ರದುರ್ಗ 402, ದಕ್ಇಣ ಕನ್ನಡ 1058, ದಾವಣಗೆರೆ 257, ಧಾರವಾಡ 726, ಗದಗ 150, ಹಾಸನ 1739, ಹಾವೇರಿ 44, ಕಲಬುರಗಿ 514, ಕೊಡಗು 89, ಕೋಲಾರ 481, ಕೊಪ್ಪಳ 83, ಮಂಡ್ಯ 895, ಮೈಸೂರು 1848, ರಾಯಚೂರು 205, ರಾಮನಗರ 379, ಶಿವಮೊಗ್ಗ 306, ತುಮಕೂರು 1731, ಉಡುಪಿ 801, ಉತ್ತರ ಕನ್ನಡ 587, ವಿಜಯಪುರ 53, ಯಾದಗಿರಿ 55.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು?
ಬೆಂಗಳೂರು ನಗರ 7, ತುಮಕೂರು 2, ಮೈಸೂರು 3, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಹಾಸನ, ರಾಮನಗರ, ಉತ್ತರ ಕನ್ನಡ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

TV9 Kannada


Leave a Reply

Your email address will not be published. Required fields are marked *