Crime News: ಪಿಸ್ತೂಲ್ ತೋರಿಸಿ ಸಿನಿಮೀಯ ರೀತಿ ದರೋಡೆ, ಬಾರ್​ನಲ್ಲಿದ್ದ ಕಾಣಿಕೆ ಡಬ್ಬಿ ಕಳವು, ಹುಲಿಹೈದರ್ ಗ್ರಾಮದಲ್ಲಿ ಮತ್ತೆ ದೌರ್ಜನ್ಯ | Crime News Karnataka Update Robbery in Bengaluru Theft in Banakal Bar Atrocity in Hulihyder Village


Crime News: ಪಿಸ್ತೂಲ್ ತೋರಿಸಿ ಸಿನಿಮೀಯ ರೀತಿ ದರೋಡೆ, ಬಾರ್​ನಲ್ಲಿದ್ದ ಕಾಣಿಕೆ ಡಬ್ಬಿ ಕಳವು, ಹುಲಿಹೈದರ್ ಗ್ರಾಮದಲ್ಲಿ ಮತ್ತೆ ದೌರ್ಜನ್ಯ

ಸಾಂಕೇತಿಕ ಚಿತ್ರ

ಬೆಂಗಳೂರು: ವೈದ್ಯಕೀಯ ಸಿಬ್ಬಂದಿ ಸೋಗಿನಲ್ಲಿ ಬಂದಿದ್ದ ಮೂವರು ಪಿಸ್ತೂಲ್​ ತೋರಿಸಿ ಸಿನಿಮೀಯ ರೀತಿ ದರೋಡೆ ಮಾಡಿರುವ ಘಟನೆ ಯಶವಂತಪುರ ಠಾಣಾ ವ್ಯಾಪ್ತಿಯ ಎಸ್​ಬಿಎಂ ಕಾಲೊನಿಯಲ್ಲಿ ನಡೆದಿದೆ. ಲಸಿಕೆ ಹಾಕುವುದಾಗಿ ಸಂಪತ್ ಸಿಂಗ್ ಎಂಬುವವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಪಿಸ್ತೂಲ್ ತೋರಿಸಿ 150 ಗ್ರಾಂ ಚಿನ್ನಾಭರಣ ದೋಚಿ, ಪರಾರಿಯಾಗಿದ್ದಾರೆ. ಘಟನೆ ನಡೆದಾಗ ಮನೆಯಲ್ಲಿ ಸಂಪತ್ ಸಿಂಗ್ ಅವರು ಮನೆಯಲ್ಲಿ ಇರಲಿಲ್ಲ. ಅವರ ತಾಯಿ ಹಾಗೂ ಪತ್ನಿ ಇಬ್ಬರೇ ಮನೆಯಲ್ಲಿದ್ದರು. ಕಾರು ಹಾಗೂ ಬೈಕಿನಲ್ಲಿ ದುಷ್ಕರ್ಮಿಗಳು ಮನೆಗೆ ಬಂದಿದ್ದರು. ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾರ್​ನಲ್ಲಿದ್ದ ಕಾಣಿಕೆ ಡಬ್ಬಿ ಕಳವು
ಚಿಕ್ಕಮಗಳೂರು:
ಬಾರ್‌ಗೆ ನುಗ್ಗಿ ದೇವರಿಗೆ ಇಟ್ಟಿದ್ದ ಕಾಣಿಕೆ ಡಬ್ಬಿ ಕಳ್ಳತನ ಮಾಡಿರುವ ಘಟನೆ ಮೂಡಿಗೆರೆ ತಾಲ್ಲೂಕು ಬಣಕಲ್‌ ಗ್ರಾಮದ ಸಂಭ್ರಮ್ ಬಾರ್‌ನಲ್ಲಿ ನಡೆದಿದೆ. ಕ್ಯಾಶ್ ಕೌಂಟರ್‌ನಲ್ಲಿ ಹಣ ಸಿಗದಿದ್ದಾಗ ಕಾಣಿಕೆ ಡಬ್ಬಿ ಕಳವು ಮಾಡಿ ಕಳ್ಳರು ಪರಾರಿಯಾಗಿದ್ದಾರೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭತ್ತ ಕಟಾವು ಯಂತ್ರ ಕಳವು
ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಕುಪ್ಪಿ ಗ್ರಾಮದಲ್ಲಿ ಭತ್ತ ಕಟಾವು ಮಾಡುವ ಯಂತ್ರವನ್ನು ಕಳ್ಳತನ ಮಾಡಲಾಗಿದೆ. ಭಾನುವಾರ (ನ.28) ರಾತ್ರಿ ಜಮೀನು ಬಳಿ ನಿಲ್ಲಿಸಿದ್ದ ಹುಣಸಗಿ ತಾಂಡಾದ ರಾಜು ಎಂಬುವರಿಗೆ ಸೇರಿದ ಯಂತ್ರ ಕಳುವಾಗಿದೆ. ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳುವಾಗಿರುವ ಭತ್ತದ ಕಟಾವು ಯಂತ್ರವು ಲಕ್ಷಾಂತರ ರೂಪಾಯಿ ಬೆಳೆಬಾಳುತ್ತದೆ. ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟ್ರ್ಯಾಕ್ಟರ್ ಡಿಕ್ಕಿ: ಮಹಿಳೆ ಸಾವು
ಮಂಡ್ಯ: ಟ್ರ್ಯಾಕ್ಟರ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಜಕ್ಕನಹಳ್ಳಿಯಲ್ಲಿ ನಡೆದಿದೆ. ಮಂಗನಹೊಸಳ್ಳಿ ನಿವಾಸಿ ಮಂಜಮ್ಮ (45) ಮೃತ ದುರ್ದೈವಿ. ಕಿಕ್ಕೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹುಲಿಹೈದರ್ ಗ್ರಾಮದಲ್ಲಿ ಮತ್ತೆ ದೌರ್ಜನ್ಯ
ಕೊಪ್ಪಳ: ರಾಜ್ಯದಲ್ಲಿ ಸದ್ದು ಮಾಡಿದ್ದ ಯಲ್ಲಾಲಿಂಗ ಕೊಲೆ ಪ್ರಕರಣದ ಆರೋಪಿ ಹನುಮೇಶ್ ಸೋದರರಿಂದ ಹುಲಿಹೈದರ್ ಗ್ರಾಮದಲ್ಲಿ ಮತ್ತೆ ದೌರ್ಜನ್ಯ ನಡೆದಿದೆ. ಆರೋಪಿಗಳಾದ ಹನುಮೇಶ್ ನಾಯಕ್​ ಸೋದರ ನರಸಿಂಹ ನಾಯಕ್, ಉಮೇಶ್ ನಾಯಕ್, ಅಶೋಕ ನಾಯಕ್, ಹನುಮೇಶ್​​ ಸೋದರಿಯ ಪತಿ ಮಾರುತಿಯಿಂದಲೂ ಹಲ್ಲೆ ನಡೆದಿದೆ. ಗ್ರಾಮ ಪಂಚಾಯಿತಿ ಕಚೇರಿಗೆ ನುಗ್ಗಿದ 20ಕ್ಕೂ ಹೆಚ್ಚು ಜನರು ಉಪಾಧ್ಯಕ್ಷ ಶಿವಶಂಕರ ಚನ್ನದಾಸರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಕಚೇರಿಯಲ್ಲಿ ಲಸಿಕಾ ಕಾರ್ಯಕ್ರಮ ನಡೆಯುತ್ತಿತ್ತು. ಉಪಾಧ್ಯಕ್ಷರನ್ನು ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಹನುಮೇಶ್, ಸೋದರರು ಮತ್ತು ಮಗನ ಗಡಿಪಾರು ಮಾಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಶಿವಶಂಕರ್ ಮನವಿ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಜಾಗದ ವಿಚಾರಕ್ಕೆ ಅಕ್ಕನ ಕೊಲೆಗೆ ಸುಪಾರಿ ನೀಡಿದ್ದ ತಮ್ಮ! 7 ತಿಂಗಳ ಹಿಂದೆ ನಡೆದ ಕೊಲೆಯ ರಹಸ್ಯವನ್ನು ಖಾಕಿ ಭೇದಿಸಿದ್ದೇಗೆ?
ಇದನ್ನೂ ಓದಿ: Crime News: ಪೊಲೀಸರು ಅಪಘಾತವೆಂದು ನಂಬಿದ್ದ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್​; ಉದ್ಯಮಿಯ ಜೀವ ತೆಗೆದ ಗೆಳೆಯ !

TV9 Kannada


Leave a Reply

Your email address will not be published. Required fields are marked *