Crime News: ಮಟ್ಕಾ ಬುಕ್ಕಿಗಳನ್ನು ಗಡಿಪಾರು ಮಾಡಿ ಬಳ್ಳಾರಿ ಜಿಲ್ಲಾಡಳಿತ ಆದೇಶ | Bellary District Collector orders the expulsion of Matka Bookkeepers


Crime News: ಮಟ್ಕಾ ಬುಕ್ಕಿಗಳನ್ನು ಗಡಿಪಾರು ಮಾಡಿ ಬಳ್ಳಾರಿ ಜಿಲ್ಲಾಡಳಿತ ಆದೇಶ

ಮಟ್ಕಾ ಸಾಂದರ್ಭಿಕ ಚಿತ್ರ

ಬಳ್ಳಾರಿ ಜಿಲ್ಲೆಯಲ್ಲಿ ಮಟ್ಕಾ ದಂಧೆಗೆ ಕಡಿವಾಣ ಹಾಕಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಇಂದು 6 ಮಟ್ಕಾ ಬುಕ್ಕಿಗಳನ್ನು ಗಡಿಪಾರು ಮಾಡಿ ಆದೇಶಿಸಲಾಗಿದ್ದು, ಈವರೆಗೆ 15 ಜನ ಮಟ್ಕಾ ಬುಕ್ಕಿಗಳನ್ನು ಗಡಿಪಾರು ಮಾಡಲಾಗಿದೆ.

ಬಳ್ಳಾರಿ: ಪೊಲೀಸ್ ಇಲಾಖೆಯ ಸೂಚನೆಯಂತೆ ಮಟ್ಕಾ ಬುಕ್ಕಿಗಳನ್ನು ಗಡಿಪಾರು ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಬಳ್ಳಾರಿ ಜಿಲ್ಲೆಯಲ್ಲಿ ಮಟ್ಕಾ ದಂಧೆಗೆ ಕಡಿವಾಣ ಹಾಕಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಅದರಂತೆ 18 ಮಟ್ಕಾ ಬುಕ್ಕಿಗಳನ್ನು ಗಡಿಪಾರು ಮಾಡುವಂತೆ ಪೊಲೀಸ್ ಇಲಾಖೆ ಜಿಲ್ಲಾಧಿಕಾರಿಗಳಿಗೆ ಪಟ್ಟಿಯನ್ನು ಸಲ್ಲಿಸಿತ್ತು. ಅದರಂತೆ  ಬಳ್ಳಾರಿ, ಮೋಕಾ, ಸಿರಿಗೇರಿ, ತೆಕ್ಕಲಕೋಟೆ, ಹಚ್ಚೋಳಿ ಠಾಣೆಯ 6 ಮಟ್ಕಾ ಬುಕ್ಕಿಗಳಿಗೆ ಗಡಿಪಾರು ಮಾಡಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ.

ಬಳ್ಳಾರಿಯ ರೆಹಮಾನ್ ಅಲಿಯಾಸ್ ಉದ್ದಿನಕಡ್ಡಿ ರೆಹಮಾನ್, ಗುರುಸ್ವಾಮಿ ಅಲಿಯಾಸ್ ಪ್ರಭಾಕರ್, ಮೋಕಾ ಗ್ರಾಮದ ವೆಂಟಕೇಶಗೌಡ, ಸಿರಗುಪ್ಪತಾಲೂಕಿನ ಮಹೇಶಗೌಡ, ಚಿದಾನಂದ್, ಗೌಸ್ ಎನ್ನುವ ಮಟ್ಕಾ ಬುಕ್ಕಿಗಳನ್ನು ಗಡಿಪಾರು ಮಾಡುವಂತೆ ಆದೇಶಿಸಲಾಗಿದೆ. ಬಳ್ಳಾರಿಯಲ್ಲಿ ಇದೂವರೆಗೂ 15 ಜನ ಮಟ್ಕಾ ಬುಕ್ಕಿಗಳನ್ನು ಗಡಿಪಾರು ಮಾಡಲಾಗಿದೆ.

TV9 Kannada


Leave a Reply

Your email address will not be published.