
ಸಾಂದರ್ಭಿಕ ಚಿತ್ರ
ಚಿಂತಾಮಣಿ -ಶಿಡ್ಲಘಟ್ಟ ತಾಲೂಕಿನಲ್ಲಿ 11kv ಲೈನ್ನ ಹಳೇ ತಂತಿ ತೆಗೆದು ಹೊಸ ತಂತಿ ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪ ಮಾಡಿದ್ದಾರೆ.
ಚಿಕ್ಕಬಳ್ಳಾಪುರ: ವಿದ್ಯುತ್ ಪ್ರವಹಿಸಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ತಳಗವಾರ-ಮುತ್ತುಗದಹಳ್ಳಿ ಗ್ರಾಮಗಳ ಮಧ್ಯೆ ನಡೆದಿದೆ. ಸಿದ್ದಪ್ಪ(19), ಸಂಜಯ್(22) ಮೃತ ಕಾರ್ಮಿಕರು. ಮತ್ತೊಬ್ಬ ಕಾರ್ಮಿಕ ಫರ್ವೇಜ್ಗೆ ಗಂಭೀರ ಗಾಯಗಳಾಗಿದ್ದು ಗಾಯಾಳನ್ನು ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಚಿಂತಾಮಣಿ -ಶಿಡ್ಲಘಟ್ಟ ತಾಲೂಕಿನಲ್ಲಿ 11kv ಲೈನ್ನ ಹಳೇ ತಂತಿ ತೆಗೆದು ಹೊಸ ತಂತಿ ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪ ಮಾಡಿದ್ದಾರೆ. ತುಮಕೂರು ಮೂಲದ ರಾಜಾ ಎಲೆಕ್ಟ್ರಿಕಲ್ನ ಗಂಗರಾಜ ಎಂಬುವರಿಗೆ ಸೇರಿದ 50 ಕೋಟಿ ರೂಪಾಯಿ ಮೊತ್ತದ ಗುತ್ತಿಗೆ ಕಾಮಗಾರಿ ಇದಾಗಿದ್ದು ಕೂಲಿ ಕಾರ್ಮಿಕರಿಗೆ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಇದ್ದುದ್ದೇ ದುರಂತ ಕಾರಣ ಎನ್ನಲಾಗಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.