CSK vs RCB Live Score, IPL 2022: ಸೂಪರ್​ ಕಿಂಗ್ಸ್​​ಗೆ ರಾಯಲ್ ಚಾಲೆಂಜ್​: ಹೈ ವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಶುರು


CSK vs RCB Live Score, IPL 2022

IPL 2022: ಐಪಿಎಲ್​ನ 22ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸಿಎಸ್​ಕೆ (CSK vs RCB) ಮುಖಾಮುಖಿಯಾಗಲಿದೆ. ಈ ಪಂದ್ಯವು ಎರಡು ಕಾರಣಗಳಿಂದ ವಿಶೇಷ ಎನಿಸಿಕೊಂಡಿದೆ. ಒಂದು ಆಡಿರುವ ನಾಲ್ಕು ಪಂದ್ಯಗಳಲ್ಲಿ ಸೋತಿರುವ ಸಿಎಸ್​ಕೆ ತಂಡಕ್ಕೆ ಈ ಬಾರಿ ಜಯ ಸಿಗಲಿದೆಯಾ ಎಂಬ ಕಾರಣಕ್ಕೆ, ಮತ್ತೊಂದು ಮುಖಾಮುಖಿಯಾಗುತ್ತಿರುವುದು ಐಪಿಎಲ್​ನ ಸಾಂಪ್ರದಾಯಿಕ ಎದುರಾಳಿಗಳಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು. ಹೀಗಾಗಿ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನಂತು ನಿರೀಕ್ಷಿಸಬಹುದು. ಉಭಯ ತಂಡಗಳು ಇದುವರೆಗೆ 28 ಪಂದ್ಯಗಳನ್ನು ಆಡಿದೆ. ಈ ವೇಳೆ ಸಿಎಸ್​ಕೆ 18 ಬಾರಿ ಗೆದ್ದಿದೆ. ಅಂದರೆ ಆರ್​ಸಿಬಿ ಸಿಎಸ್​ಕೆ ವಿರುದ್ದ ಗೆದ್ದಿದ್ದು ಕೇವಲ 9 ಬಾರಿ ಮಾತ್ರ. ಇನ್ನು ಕಳೆದ ಸೀಸನ್​ ಐಪಿಎಲ್​ನಲ್ಲೂ ಆರ್​ಸಿಬಿ ವಿರುದ್ದ ಸಿಎಸ್​ಕೆ 2 ಪಂದ್ಯಗಳನ್ನು ಗೆದ್ದಿದೆ. ಅಂದರೆ ಸಿಎಸ್​ಕೆ ತಂಡವು ಇದುವರೆಗೆ ಆರ್​ಸಿಬಿ ವಿರುದ್ದ ಅತ್ಯುತ್ತಮ ಪ್ರದರ್ಶನ ನೀಡಿರುವುದು ಸ್ಪಷ್ಟ. ಅಂದರೆ ಆರ್​ಸಿಬಿ ವಿರುದ್ದ ಸಿಎಸ್​ಕೆ ತಂಡವೇ ಬಲಿಷ್ಠ. ಆದರೆ ಈ ಬಾರಿ ತಂಡಗಳು ಬದಲಾಗಿದೆ. ಅದರಲ್ಲೂ ಆರ್​ಸಿಬಿ ತಂಡವು ಉತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಈ ಸಲ ಆರ್​ಸಿಬಿ ಭರ್ಜರಿ ಪೈಪೋಟಿ ನೀಡುವ ನಿರೀಕ್ಷೆಯಿದೆ.

ಚೆನ್ನೈ ಸೂಪರ್ ಕಿಂಗ್ಸ್ (CSK):
ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಮೊಯಿನ್ ಅಲಿ,  ಶಿವಂ ದುಬೆ, ದೀಪಕ್ ಚಹರ್, ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ಕೆಎಂ ಆಸಿಫ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಎನ್ ಜಗದೀಶನ್, ಹರಿ ನಿಶಾಂತ್, ಸುಭ್ರಂಶು ಸೇನಾಪತಿ , ರಾಜವರ್ಧನ್ ಹಂಗರ್ಗೇಕರ್, ಭಗತ್ ವರ್ಮಾ, ಪ್ರಶಾಂತ್ ಸೋಲಂಕಿ, ಕ್ರಿಸ್ ಜೋರ್ಡನ್, ಡ್ವೈನ್ ಪ್ರಿಟೋರಿಯಸ್, ಡೆವೊನ್ ಕಾನ್ವೇ, ಆಡಮ್ ಮಿಲ್ನೆ, ಮಿಚೆಲ್ ಸ್ಯಾಂಟ್ನರ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB):
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ.

TV9 Kannada


Leave a Reply

Your email address will not be published.