CWG 2022: ಭಾರತದ ಮಹಿಳಾ ಕುಸ್ತಿಪಟು ಅಂಶು ಮಲಿಕ್ 57 ಕೆಜಿ ತೂಕ ವಿಭಾಗದಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದ್ದು, ಈ ಮೂಲಕ ಪದಕ ಖಚಿತಪಡಿಸಿದ್ದಾರೆ.

ಭಾರತದ ಮಹಿಳಾ ಕುಸ್ತಿಪಟು ಅನ್ಶು ಮಲಿಕ್ 57 ಕೆಜಿ ತೂಕ ವಿಭಾಗದಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದ್ದು, ಈ ಮೂಲಕ ಪದಕ ಖಚಿತಪಡಿಸಿದ್ದಾರೆ. ಅನ್ಶು ಮುಂದೆ ಶ್ರೀಲಂಕಾದ ನೇತ್ಮಿ ಅಹಿಂಸಾ ಫೆರ್ನಾಂಡೋ ನಿಲ್ಲಲು ಸಾಧ್ಯವಾಗಲಿಲ್ಲ. ತಾಂತ್ರಿಕ ಪ್ರಾವೀಣ್ಯತೆಯ ಆಧಾರದ ಮೇಲೆ ಅನ್ಶು ಅವರನ್ನು ವಿಜೇತೆ ಎಂದು ಘೋಷಿಸಲಾಯಿತು. ಪುರುಷರ ವಿಭಾಗದಲ್ಲಿ ದೀಪಕ್ ಪುನಿಯಾ ಕೂಡ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ದೀಪಕ್ 86 ಕೆಜಿ ತೂಕ ವಿಭಾಗದಲ್ಲಿ ಕೆನಡಾದ ಮೂರ್ ಅವರನ್ನು 3-1 ಅಂತರದಿಂದ ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟರು. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ಖಚಿತಪಡಿಸಿದ್ದಾರೆ.