ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವ ಮೂಲಕ ರಾಷ್ಟ್ರದ್ರೋಹದ ಕೆಲಸ ಮಾಡಿದ್ದಾರೆ. ಹೀಗಾಗಿ ಅವರ ಮೇಲೆ ರಾಷ್ಟ್ರದ್ರೋಹ ಕೇಸ್ ದಾಖಲಿಸಿಬೇಕೆಂದು ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಈ ಕುರಿತು ಮಾತನಾಡಿದ ಕೆ.ಎಸ್.ಈಶ್ವರಪ್ಪ ನನ್ನ ಮಾತಿಗೆ ನಾನು ಬದ್ಧನಾಗಿದ್ದೇನೆ. ಶಿವಕುಮಾರ್ ತಪ್ಪು ಸಂದೇಶ ನೀಡುವ ಮೂಲಕ ಜನರ ದಾರಿ ತಪ್ಪಿಸಿದ್ದಾರೆ. ಹೀಗಾಗಿ ಅವರ ಮೇಲೆ ದೇಶದ್ರೋಹದ ಕೇಸ್ ಹಾಕಬೇಕು ಅಂತಾ ಗುಡುಗಿದ್ದಾರೆ.
ರಾಷ್ಟ್ರಧ್ವಜವನ್ನ ಕಾಂಗ್ರೆಸ್ ನಾಯಕರು ಕೇವಲ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಆದರೆ ನಾವು ನಮ್ಮ ದೇಶದ ಬಾವುಟವನ್ನು ಆರಾಧಿಸ್ತೇವೆ ನಾವು ರಾಷ್ಟ್ರ ಭಕ್ತರು ಎಂದಿದ್ದಾರೆ.