DK Shivakumar: ಡಿ.ಕೆ. ಶಿವಕುಮಾರ್​ಗೆ ನಿಂದಿಸಿದ್ದ ವ್ಯಕ್ತಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ | Sullia person who has accused the the power minister DK Shivakumar sent to 2 years jail by Sullia


DK Shivakumar: ಡಿ.ಕೆ. ಶಿವಕುಮಾರ್​ಗೆ ನಿಂದಿಸಿದ್ದ ವ್ಯಕ್ತಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಡಿ.ಕೆ. ಶಿವಕುಮಾರ್​ಗೆ ನಿಂದಿಸಿದ್ದ ವ್ಯಕ್ತಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಂಗಳೂರು: ಕೆಪಿಸಿಸಿ ಹಾಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ನಿಂದಿಸಿದ್ದ ಪ್ರಕರಣದಲ್ಲಿ ಆರೋಪಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದ ಜಡ್ಜ್​ ಸೋಮಶೇಖರ್ ಅವರು ಮಹತ್ವದ ತೀರ್ಪು ನೀಡಿದ್ದಾರೆ. ಕಾಂಗ್ರೆಸ್​ ನಾಯಕ ಡಿಕೆ ಶಿವಕುಮಾರ್​​ಗೆ ನಿಂದಿಸಿದ್ದ ಆರೋಪ ಹೊತ್ತಿದ್ದ ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈಗೆ ಜೈಲು ಶಿಕ್ಷೆ ವಿಧಿಸಲಾಗಿದೆ.

ಏನಿದು ಪ್ರಕರಣ?:
2016ರಲ್ಲಿ ಡಿಕೆ ಶಿವಕುಮಾರ್ ಇಂಧನ ಸಚಿವರಾಗಿದ್ದ ವೇಳೆ ನಡೆದಿದ್ದ ಪ್ರಕರಣ ಇದಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈ ಎಂಬಾತ 2016ರ ಫೆಬ್ರವರಿ 28ರಂದು ಅಂದಿನ ಇಂಧನ ಸಚಿವ ಡಿಕೆ ಶಿವಕುಮಾರ್​​ಗೆ ಕರೆ ಮಾಡಿದ್ದರು. ವಿದ್ಯುತ್ ಸಮಸ್ಯೆ ಹೇಳಿಕೊಳ್ಳಲು ಕರೆ ಮಾಡಿದ್ದ ವೇಳೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಅಂದಿನ ಮೆಸ್ಕಾಂ ಎಂಡಿ ಮೂಲಕ ಗಿರಿಧರ್ ವಿರುದ್ದ ಡಿಕೆ ಶಿವಕುಮಾರ್ ಪೊಲೀಸ್ ದೂರು ದಾಖಲಿಸಿದ್ದರು. ಕೇಸು ದಾಖಲಿಸಿಕೊಂಡಡಿದ್ದ ಪೊಲೀಸರು ರಾತ್ರೋರಾತ್ರಿ ಗಿರಿಧರ್ ರೈನನ್ನು ಬಂಧಿಸಿದ್ದರು.

ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯಲು ಹೋಗಿ GKVK ಇಬ್ಬರು ವಿದ್ಯಾರ್ಥಿಗಳು ನೀರುಪಾಲು
ಉಡುಪಿ: ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯಲು ಹೋಗಿ ಯುವಕರಿಬ್ಬರು ನೀರುಪಾಲಾಗಿದ್ದಾರೆ. ಮಲ್ಪೆ ಬೀಚ್ ಸಮೀಪದ ಸೈಂಟ್ ಮೇರಿಸ್ ದ್ವೀಪದತ್ತ ಪ್ರವಾಸ ಬಂದಿದ್ದ ಬೆಂಗಳೂರಿನ GKVK ಕೃಷಿ ಕಾಲೇಜು ವಿದ್ಯಾರ್ಥಿಗಳು ಮೃತರು. ಒಟ್ಟು 68 ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಲೈಫ್ ಗಾರ್ಡ್ ಸಿಬ್ಬಂದಿಗಳ ಸೂಚನೆ ಮೀರಿ ಸೆಲ್ಫಿ ತೆಗೆಯಲು ಹೋದಾಗ ಯುವಕರು ದುರಂತಕ್ಕೆ ಈಡಾಗಿದ್ದಾರೆ. ಲೈಫ್ ಗಾರ್ಡ್ ಸಿಬ್ಬಂದಿ ಓರ್ವನ ಶವ ಮೇಲಕ್ಕೆತ್ತಿದ್ದು, ಸತೀಶ್ (21) ನೀರುಪಾಲಾದ ಒಬ್ಬ ಯುವಕ ಎಂದು ಗುರುತಿಸಲಾಗಿದೆ. ನೀರು ಪಾಲದ ಮತ್ತೊಬ್ಬ ಯುವಕನ ಹೆಸರೂ ಸತೀಶ್ (21) ಎಂದಿದ್ದು, ಆತನಿಗಾಗಿ ಶೋಧ ನಡೆದಿದೆ.

ಇದೂ ಓದಿ:
ಭ್ರಷ್ಟಾಚಾರ ಆರೋಪ: ದಾಖಲೆ ನೀಡಿದರೆ ತನಿಖೆ ಎಂದ ಸಿಎಂ ಬೊಮ್ಮಾಯಿ, ಸಾಕ್ಷ್ಯ ರೂಪದಲ್ಲಿ ಮತ್ತೆ ದಿಂಗಾಲೇಶ್ವರ ಶ್ರೀ ಆರೋಪ

ಇದೂ ಓದಿ:
ಹಂಪಿ ಸ್ಮಾರಕಗಳ ಸೌಂದರ್ಯಕ್ಕೆ ಮನಸೋತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ವಿರೂಪಾಕ್ಷೇಶ್ವರ ದೇಗುಲದಲ್ಲಿ ವಿಶೇಷ ಪೂಜೆ

TV9 Kannada


Leave a Reply

Your email address will not be published. Required fields are marked *