DK Shivakumar Press Meet: ಅರ್ಧ ಗಂಟೆಯಲ್ಲಿ ಮುಗಿಯುವ ವಿಚಾರಣೆ 3 ದಿನ ನಡೆಸಿದ್ದಾರೆ, ರಾಹುಲ್ ಗಾಂಧಿಗೆ ಇಲ್ಲಸಲ್ಲದ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ | DK Shivakumar hold Press Meet in kpcc office and alligation bjp misusing its power


ನ್ಯಾಷನಲ್ ಹೆರಾಲ್ಡ್ ಗಾಂಧಿ ಕುಟುಂಬಕ್ಕೆ ಸೇರಿದ ಸ್ವತ್ತಲ್ಲ. ನ್ಯಾಷನಲ್ ಹೆರಾಲ್ಡ್ ಕಾಂಗ್ರೆಸ್ ಪಕ್ಷದ ಧ್ವನಿಯಾಗಿತ್ತು. ಕಾನೂನಿನಲ್ಲಿ ಎಲ್ಲೂ ಸಾಲ ಕೊಡಬಾರದೆಂದು ಹೇಳಿಲ್ಲ. ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ನಾವೆಲ್ಲರೂ ಹಣ ಹಾಕಿದ್ದೇವೆ.

ಬೆಂಗಳೂರು: ನಗರದ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar), ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ತುರ್ತು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ(Ramalinga Reddy), ಸಲೀಂ ಅಹ್ಮದ್(Salim Ahmed), ಧ್ರುವನಾರಾಯಣ(Dhruvanarayana) ಉಪಸ್ಥಿತರಿದ್ದಾರೆ. ನಾಳೆ ಕೆಪಿಸಿಸಿ ಕಚೇರಿಯಿಂದ ರಾಜಭವನದವರೆಗೆ ಮೆರವಣಿಗೆ ಮೂಲಕ ತೆರಳಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ. ನಾಳೆ ಬೆಳಗ್ಗೆ 9.30ರಿಂದ ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ. ಕಾಂಗ್ರೆಸ್ನ ನೂರಾರು ಕಾರ್ಯಕರ್ತರ ಜೊತೆ ಮುತ್ತಿಗೆ ಹಾಕುತ್ತೇವೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಜಂಟಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ದೇಶದಲ್ಲಿ ನಡೆಯುತ್ತಿರುವ ಅಧಿಕಾರ ದುರುಪಯೋಗ, ಸಂವಿಧಾನಿಕ ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಬಿಜೆಪಿ ಸರ್ಕಾರ ನಡೆಸುತ್ತಿರುವ ದ್ವೇಷದ ರಾಜಕಾರಣ ಹಾಗೂ ಪ್ರತಿಭಟನೆ ನಿರತರ ಮೇಲೆ ದೌರ್ಜನ್ಯ ಖಂಡಿಸಿ ಜೂನ್ 16, 2022 ರಂದು ಗುರುವಾರ ಬೆಳಗ್ಗೆ 10 ಗಂಟೆಗೆ ಪಕ್ಷದ ಕಚೇರಿಯಿಂದ ರಾಜಭವನ ಚಲೋ, ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

TV9 Kannada


Leave a Reply

Your email address will not be published.