‘DKS ಅಪ್ಪಟ್ಟ ಸುಳ್ಳು ಹೇಳುವ ಮೂಲಕ ಮನಗೂಳಿಗೆ ಅಪಚಾರ ಮಾಡಿದ್ದಾರೆ’- HDK ಕಿಡಿಕಾರಿದ್ದೇಕೆ?

ಬೆಂಗಳೂರು: ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವುದು ರಾಜಕೀಯವಾಗಿ, ವೈಯಕ್ತಿಕವಾಗಿ ʼಅನೈತಿಕʼ ಎಂಬುದು ನನ್ನ ಅಭಿಪ್ರಾಯ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ʼಅಪ್ಪಟ ಸುಳ್ಳುʼ ಹೇಳುವ ಮೂಲಕ ದಿವಂಗತ ನಾಯಕ ಎಂಸಿ ಮನಗೂಳಿ ಅವರಿಗೆ ಅಪಚಾರ ಮಾಡಿದ್ದಾರೆ ಎಂದು ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ಟ್ವೀಟ್​​ ಮಾಡಿದ್ದಾರೆ.

ತಾವು ನಿಧನರಾಗುವುದಕ್ಕೆ 15 ದಿನ ಮೊದಲು ಮನಗೂಳಿ ಅವರು ತಮ್ಮ ಪುತ್ರ ಅಶೋಕ್ ಅವರನ್ನು ಕರೆದುಕೊಂಡು ನಮ್ಮ ಮನೆಗೆ ಬಂದಿದ್ದರು. ನನಗೆ ವಯಸ್ಸಾಗಿದೆ, ಆರೋಗ್ಯ ಸರಿ ಇಲ್ಲ. ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ, ಅಶೋಕನನ್ನು ನಿಮ್ಮ ಹಾಗೂ ಸಿದ್ದರಾಮಯ್ಯ ಮಡಿಲಿಗೆ ಹಾಕುತ್ತಿದ್ದೇನೆ ಎಂದು ಡಿಕೆ ಶಿವಕುಮಾರ್‌ ಅವರಿಗೆ ಹೇಳಿದ್ದರಂತೆ ಎಂದು ವ್ಯಂಗ್ಯವಾಡಿದ್ದಾರೆ.

ಸುಳ್ಳುಗಳನ್ನು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎನ್ನುವುದಕ್ಕೆ ಇದಕ್ಕಿಂತ ಅತ್ಯುತ್ತಮ ಉದಾಹರಣೆ ಬೇರೆ ಇಲ್ಲ. ಸತ್ಯ ಏನೆಂದರೆ; ಕೋವಿಡ್ ಸೋಂಕಿತರಾಗಿದ್ದ ಮನಗೂಳಿ ಅವರನ್ನು ಬೆಂಗಳೂರಿನ ಅಪೊಲೋ ಆಸ್ಪತ್ರೆಗೆ ನಾವೇ ಸೇರಿಸಿದ್ದೆವು. 19 ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದರು ಎಂದರು.

ಇದನ್ನೂ ಓದಿ: ಡಿ.ಕೆ ಶಿವಕುಮಾರ್-ಹೆಚ್​.ಡಿ ಕುಮಾರಸ್ವಾಮಿ ನಡುವೆ ಬಿರುಕು..

News First Live Kannada

Leave a comment

Your email address will not be published. Required fields are marked *