2020ರಲ್ಲಿ ಚುನಾವಣೆಯಲ್ಲಿ ಸೋತಿದ್ದ ಡೊನಾಲ್ಡ್ ಟ್ರಂಪ್ ಮತ್ತೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಇದುವರೆಗೂ ಏನೂ ಹೇಳಿರಲಿಲ್ಲ. ಆದರೆ, ಇದೀಗ ತಾನು ಮತ್ತೆ ಚುನಾವಣಾ ಕಣಕ್ಕೆ ಇಳಿಯಲು ಸಿದ್ಧ ಎಂದು ಹೇಳಿದ್ದಾರೆ.

ಡೊನಾಲ್ಡ್ ಟ್ರಂಪ್
ಕ್ಯಾಲಿಫೋರ್ನಿಯಾ: ಕಳೆದ ವಾರ ಓಹಿಯೋದಲ್ಲಿ ಚುನಾವಣೆ ಪ್ರಚಾರ ಮಾಡುವಾಗ ಮುಂದಿನ ವಾರ ಬಹಳ ದೊಡ್ಡ ಘೋಷಣೆ ಮಾಡಲಿದ್ದೇನೆ ಎನ್ನುವ ಮೂಲಕ ಕುತೂಹಲ ಸೃಷ್ಟಿಸಿದ್ದರು. ಆ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದ್ದು, ಡೊನಾಲ್ಡ್ ಟ್ರಂಪ್ (Donald Trump) 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ (US President Election 2024) ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. 2020ರಲ್ಲಿ ಚುನಾವಣೆಯಲ್ಲಿ ಸೋತಿದ್ದ ಡೊನಾಲ್ಡ್ ಟ್ರಂಪ್ ಮತ್ತೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಇದುವರೆಗೂ ಏನೂ ಹೇಳಿರಲಿಲ್ಲ. ಆದರೆ, ಇದೀಗ ತಾನು ಮತ್ತೆ ಚುನಾವಣಾ ಕಣಕ್ಕೆ ಇಳಿಯಲು ಸಿದ್ಧ ಎಂದು ಹೇಳಿದ್ದಾರೆ.
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಹಾಯಕರು 2024ರ ಅಧ್ಯಕ್ಷೀಯ ಚುನಾವಣೆಗೆ US ಫೆಡರಲ್ ಚುನಾವಣಾ ಆಯೋಗಕ್ಕೆ ದಾಖಲೆಗಳನ್ನು ಸಲ್ಲಿಸಿದ್ದಾರೆ. ರಿಪಬ್ಲಿಕನ್ ಅಥವಾ ಡೆಮಾಕ್ರಟ್ ಪಕ್ಷದಿಂದ ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಘೋಷಿಸಿದ ಮೊದಲ ಪ್ರಮುಖ ಸ್ಪರ್ಧಿ ಟ್ರಂಪ್ ಆಗಿದ್ದಾರೆ.