Electric Scooter: ಎಲೆಕ್ಟ್ರಿಕ್ ಸ್ಕೂಟರ್ ಚಾರ್ಜಿಂಗ್ ವೇಳೆ ಬ್ಯಾಟರಿ ಸ್ಫೋಟ; 7 ವರ್ಷದ ಬಾಲಕ ಸಾವು | Electric scooter battery Explodes while charging 7 year old boy dies in Mumbai Crime News


ಮಹಾರಾಷ್ಟ್ರದ ಪಲ್ಘಾರ್​ನ ವಸೈನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಚಾರ್ಜ್ ಮಾಡುತ್ತಿರುವಾಗ ಉಂಟಾದ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡ ಬಾಲಕ ಚಿಕಿತ್ಸೆ ವೇಳೆ ಕೊನೆಯುಸಿರೆಳೆದಿದ್ದಾನೆ.

Electric Scooter: ಎಲೆಕ್ಟ್ರಿಕ್ ಸ್ಕೂಟರ್ ಚಾರ್ಜಿಂಗ್ ವೇಳೆ ಬ್ಯಾಟರಿ ಸ್ಫೋಟ; 7 ವರ್ಷದ ಬಾಲಕ ಸಾವು

ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ

ಪಲ್ಘಾರ್: ಚಾರ್ಜ್ ಮಾಡುತ್ತಿದ್ದ ವೇಳೆ ಎಲೆಕ್ಟ್ರಿಕ್ ಸ್ಕೂಟರ್‌ನ (Electric Scooter) ಬ್ಯಾಟರಿ ಸ್ಫೋಟಗೊಂಡು 7 ವರ್ಷದ ಬಾಲಕನೊಬ್ಬ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ (Shocking News) ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಮೃತ ಬಾಲಕನನ್ನು ಶಬ್ಬೀರ್ ಅನ್ಸಾರಿ ಎಂದು ಗುರುತಿಸಲಾಗಿದೆ. ಈ ಘಟನೆಯ ಕುರಿತು ತನಿಖೆ ನಡೆಯುತ್ತಿದೆ.

ಎಲೆಕ್ಟ್ರಿಕ್ ಸ್ಕೂಟರ್‌ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿರುವುದು ಇದೇ ಮೊದಲನೇನಲ್ಲ. ಈ ರೀತಿಯ ಘಟನೆಗಳು ಆತಂಕಕ್ಕೆ ಕಾರಣವಾಗಿದೆ. ಈ ವರ್ಷದ ಆರಂಭದಲ್ಲಿ ತೆಲಂಗಾಣದಲ್ಲಿ ತನ್ನ ಮನೆಯಲ್ಲಿ ಚಾರ್ಜಿಂಗ್‌ಗಾಗಿ ಇರಿಸಲಾಗಿದ್ದ ಎಲೆಕ್ಟ್ರಿಕ್ ಸ್ಕೂಟರ್‌ನ ಡಿಟ್ಯಾಚಬಲ್ ಬ್ಯಾಟರಿ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿತ್ತು. ಹಾಗೇ, ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಚಾರ್ಜ್ ಮಾಡುವಾಗ ಬ್ಯಾಟರಿ ಸ್ಫೋಟಗೊಂಡು ಹೊಗೆಯಿಂದ ಉಸಿರುಗಟ್ಟಿ ತಂದೆ ಮತ್ತು ಮಗಳು ಸಾವನ್ನಪ್ಪಿರುವ ಘಟನೆ ವೆಲ್ಲೂರು ಜಿಲ್ಲೆಯಲ್ಲಿ ನಡೆದಿತ್ತು.

TV9 Kannada


Leave a Reply

Your email address will not be published.