Jammu Kashmir News: ಬರಾಮುಲ್ಲಾ ಜಿಲ್ಲೆಯ ವನಿಗಮ್ ಬಾಲಾ ಪ್ರದೇಶದಲ್ಲಿ ಎನ್ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ನಿರತವಾಗಿವೆ

Image Credit source: Zee News
ಶ್ರೀನಗರ: ಉತ್ತರ ಕಾಶ್ಮೀರದ ಬರಾಮುಲ್ಲಾ (Baramulla) ಜಿಲ್ಲೆಯ ವನಿಗಮ್ ಬಾಲಾ ಪ್ರದೇಶದಲ್ಲಿ ಇಂದು (ಶನಿವಾರ) ಬೆಳಗ್ಗೆ ಉಗ್ರರು (Terrorists) ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ (Encounter) ಕಾರ್ಯಾಚರಣೆ ನಡೆದಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳ ತಂಡ ಈ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಗುಂಡಿನ ಚಕಮಕಿ ಪ್ರಾರಂಭವಾಯಿತು.
“ಬರಾಮುಲ್ಲಾ ಜಿಲ್ಲೆಯ ವನಿಗಮ್ ಬಾಲಾ ಪ್ರದೇಶದಲ್ಲಿ ಎನ್ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ನಿರತವಾಗಿವೆ” ಎಂದು ಪೊಲೀಸರು ತಿಳಿಸಿದ್ದಾರೆ.
#Encounter has started at Wanigam Bala area of #Baramulla district. Police and security forces are on the job. Further details shall follow.@JmuKmrPolice
— Kashmir Zone Police (@KashmirPolice) July 29, 2022
ಭದ್ರತಾ ಪಡೆಗಳು ಬಾಲಾ ಪ್ರದೇಶವನ್ನು ಸುತ್ತುವರೆದಿವೆ. ಅಲ್ಲಿ ಅಡಗಿಕೊಂಡಿದ್ದ ಉಗ್ರರು ಭದ್ರತಾ ಪಡೆಗಳಿಂದ ಪ್ರತೀಕಾರವಾಗಿ ಗುಂಡು ಹಾರಿಸಲು ಆರಂಭಿಸಿದರು. ಎರಡೂ ಕಡೆ ಇದುವರೆಗೆ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.