Farm Laws Repeal ಕೃಷಿ ಕಾನೂನುಗಳ ರದ್ದತಿಗೆ ಇಂದು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡುವ ಸಾಧ್ಯತೆ | Union Cabinet likely to give its go ahead for the withdrawal of farm laws today

Farm Laws Repeal ಕೃಷಿ ಕಾನೂನುಗಳ ರದ್ದತಿಗೆ ಇಂದು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡುವ ಸಾಧ್ಯತೆ

ನರೇಂದ್ರ ಮೋದಿ

ನವದೆಹಲಿ: ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು(farm laws) ಹಿಂಪಡೆಯಲು ಕೇಂದ್ರ ಸಚಿವ ಸಂಪುಟ ಬುಧವಾರ ತನ್ನ ಒಪ್ಪಿಗೆಯನ್ನು ನೀಡುವ ಸಾಧ್ಯತೆಯಿದೆ. ನವೆಂಬರ್ 19 ರಂದು ಪ್ರಧಾನಿ ನರೇಂದ್ರ ಮೋದಿ (Narendra Modi )ಅವರು ಸರ್ಕಾರ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದರು.ಒಂದು ವರ್ಷಕ್ಕೂ ಹೆಚ್ಚು ಕಾಲ ಹಲವಾರು ರಾಜ್ಯಗಳಲ್ಲಿ ರೈತರು ಪ್ರತಿಭಟನೆ ನಡೆಸಿದ್ದು ಕೃಷಿ ಕಾನೂನನ್ನು ಸರ್ಕಾರ ವಾಪಸ್ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದರು. ನವೆಂಬರ್ 29 ರಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮೂರು ಕಾನೂನುಗಳನ್ನು ರದ್ದುಗೊಳಿಸಲು ಕೇಂದ್ರವು ಸಾಂವಿಧಾನಿಕ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ರಾಷ್ಟ್ರವನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದ್ದರು. ಕೃಷಿ ಕಾನೂನು ವಿರುದ್ಧ ತಮ್ಮ ಆಂದೋಲನವನ್ನು ಕೈಬಿಟ್ಟು ಹೊಸ ಆರಂಭಕ್ಕಾಗಿ ರೈತರು ಮನೆಗೆ ಮರಳುವಂತೆ ಪ್ರತಿಭಟನಾ ನಿರತ ರೈತರಿಗೆ ಪ್ರಧಾನಿ ಮೋದಿ ಮನವಿ ಮಾಡಿದರು.ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಂಸತ್ ಅಂಗೀಕರಿಸಿದ ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಪ್ರವರ್ತನೆ ಮತ್ತು ಅನುಕೂಲ) ಕಾಯಿದೆ, 2020 (Farmers’ Produce Trade and Commerce (Promotion and Facilitation) Act, 2020) ಅನ್ನು ಹಿಂಪಡೆಯಲು ಇಂದು ಸಚಿವ ಸಂಪುಟ ಸಭೆ ನಡೆಯುವ ನಿರೀಕ್ಷೆಯಿದೆ. ಅದೇ ವೇಳೆ ಸಚಿವ ಸಂಪುಟ ಅನುಮೋದನೆಗಾಗಿ ಕೃಷಿ ಕಾನೂನುಗಳ ರದ್ದತಿ ಮಸೂದೆ 2021(The Farm Laws Repeal Bill, 2021) ಅನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ರದ್ದತಿ ಮಸೂದೆಯನ್ನು ಚಳಿಗಾಲದ ಅಧಿವೇಶನದ ಕಾರ್ಯಸೂಚಿಯಲ್ಲಿ ಸೇರಿಸಿದ ಕೇಂದ್ರ ಸರ್ಕಾರ

 

TV9 Kannada

Leave a comment

Your email address will not be published. Required fields are marked *