Gaalipata 2 pre-release Event: ‘ಗಾಳಿಪಟ 2’ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ಅದ್ದೂರಿಯಾಗಿ ನಡೆಯುತ್ತಿದೆ. ಚಿತ್ರತಂಡದ ಜೊತೆ ಅನೇಕ ಅತಿಥಿಗಳು ಭಾಗಿ ಆಗಿದ್ದಾರೆ.
ಯೋಗರಾಜ್ ಭಟ್ ನಿರ್ದೇಶನದ ‘ಗಾಳಿಪಟ 2’ (Gaalipata 2) ಸಿನಿಮಾ ಹೆಚ್ಚು ನಿರೀಕ್ಷೆ ಸೃಷ್ಟಿ ಮಾಡಿದೆ. ‘ಗೋಲ್ಡನ್ ಸ್ಟಾರ್’ ಗಣೇಶ್ (Golden Star Ganesh), ದಿಗಂತ್ ಮಂಚಾಲೆ, ಪವನ್ ಕುಮಾರ್ ಮುಂತಾದವರು ನಟಿಸಿರುವ ಈ ಸಿನಿಮಾ ಆಗಸ್ಟ್ 12ರಂದು ಬಿಡುಗಡೆ ಆಗಲಿದೆ. ಇಂದು (ಜುಲೈ 31) ಬೆಂಗಳೂರಿನಲ್ಲಿ ಅದ್ದೂರಿಯಾಗಿ ಪ್ರೀ-ರಿಲೀಸ್ ಇವೆಂಟ್ (Gaalipata 2 pre-release Event) ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ. ಸಿನಿಮಾ ಬಗ್ಗೆ ಚಿತ್ರತಂಡದವರು ಅನೇಕ ಇಂಟರೆಸ್ಟಿಂಗ್ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾರೆ.