
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಶಿಮ್ಲಾದಲ್ಲಿ ‘ಗರೀಬ್ ಕಲ್ಯಾಣ್ ಸಮ್ಮೇಳನ’ದಲ್ಲಿ ಭಾಗವಹಿಸಲಿದ್ದು, ತಮ್ಮ ಸರ್ಕಾರ 8 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ನೇರವಾಗಿ ಸಂವಾದ ನಡೆಸಲಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಎನ್ಡಿಎ ಸರ್ಕಾರ 8 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮೇ 31ರಂದು ಶಿಮ್ಲಾದಲ್ಲಿ ‘ಗರೀಬ್ ಕಲ್ಯಾಣ ಸಮ್ಮೇಳನ’ದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮಂಗಳವಾರ ಶಿಮ್ಲಾದಲ್ಲಿ ‘ಗರೀಬ್ ಕಲ್ಯಾಣ್ ಸಮ್ಮೇಳನ’ದಲ್ಲಿ (Garib Kalyan Sammelan) ಭಾಗವಹಿಸಲಿದ್ದು, ತಮ್ಮ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ನೇರವಾಗಿ ಸಂವಾದ ನಡೆಸಲಿದ್ದಾರೆ.
ಈ ಸಾರ್ವಜನಿಕ ಕಾರ್ಯಕ್ರಮವನ್ನು ದೇಶದಾದ್ಯಂತ ರಾಜ್ಯ ರಾಜಧಾನಿಗಳು, ಜಿಲ್ಲಾ ಕೇಂದ್ರಗಳು ಮತ್ತು ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ. ಈ ಗರೀಬ್ ಕಲ್ಯಾಣ ಸಮ್ಮೇಳನವು ದೇಶಾದ್ಯಂತ ಚುನಾಯಿತ ಸಾರ್ವಜನಿಕ ಪ್ರತಿನಿಧಿಗಳು ನೇರವಾಗಿ ಸಾರ್ವಜನಿಕರೊಂದಿಗೆ ಸಂವಾದ ನಡೆಸುವ ಪರಿಕಲ್ಪನೆಯನ್ನು ರೂಪಿಸುತ್ತದೆ ಮತ್ತು ಸರ್ಕಾರವು ನಡೆಸುತ್ತಿರುವ ವಿವಿಧ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಪ್ರತಿಕ್ರಿಯೆಯನ್ನು ಪಡೆಯುವ ಪ್ರಯತ್ನದಲ್ಲಿದೆ.