Gold and Silver Price: ಪ್ರೀತಿಪಾತ್ರರಿಗಾಗಿ ಚಿನ್ನದ ಉಂಗುರ ಕೊಳ್ಳುವ ಪ್ಲಾನ್​ ಇದೆಯೇ? ಇಲ್ಲಿದೆ ಇಂದಿನ ಚಿನ್ನ, ಬೆಳ್ಳಿ ದರ | Gold Price today on 2022 February 14 check silver price in bangalore mumbai delhi and major city


Gold and Silver Price: ಪ್ರೀತಿಪಾತ್ರರಿಗಾಗಿ ಚಿನ್ನದ ಉಂಗುರ ಕೊಳ್ಳುವ ಪ್ಲಾನ್​ ಇದೆಯೇ? ಇಲ್ಲಿದೆ ಇಂದಿನ ಚಿನ್ನ, ಬೆಳ್ಳಿ ದರ

ಸಾಂದರ್ಭಿಕ ಚಿತ್ರ

Gold and Silver Price Today| ಬೆಂಗಳೂರು: ದಿನಕ್ಕೊಂದು ಚಿನ್ನದ ಒಡವೆ ಹಾಕಬೇಕು ಎಂಬ ಆಸೆ ಯಾರಿಗೂ ಇರುವುದಿಲ್ಲ. ಆದರೆ ಮದುವೆ ಇನ್ನಿತರ ಸಮಾರಂಭಗಳ ಸಂದರ್ಭದಲ್ಲಿ ಕುಟುಂಬಸ್ಥರ ಮುಂದೆ ನಾವು ಚೆನ್ನಾಗಿ ಕಾಣಬೇಕು ಅಥವಾ ನಮ್ಮ ಸೌಂದರ್ಯ ಹೆಚ್ಚಿಗೆಗೆ ಒಂದು ಚಿನ್ನದ ಸರವಾದರೂ ಇರಬೇಕು ಎಂಬ ಬಯಕೆ ಹಲವರದ್ದು. ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಆದರೆ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಮಾತ್ರ ಗೊಂದಲ ಇರುತ್ತದೆ. ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಫೆಬ್ರವರಿ 14, ಸೋಮವಾರ) ಯಾವ ಯಾವ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,810 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,68,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 100 ರೂಪಾಯಿ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 51,060 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,10,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 100 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ದರ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 67,400 ರೂಪಾಯಿ ದಾಖಲಾಗಿದೆ.

TV9 Kannada


Leave a Reply

Your email address will not be published.