Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಏರಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ | Gold Price today on 2021 november 13 check silver price in bangalore mumbai delhi and major city


Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಏರಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ

ಸಾಂದರ್ಭಿಕ ಚಿತ್ರ

Gold and Silver Price Today | ಬೆಂಗಳೂರು: ಚಿನ್ನ, ಬೆಳ್ಳಿಯ ಆಭರಣವನ್ನಾಗಲೀ ಅಥವಾ ಪೂಜಾ ಸಾಮಗ್ರಿಗಳನ್ನಾಗಲೀ ಕೊಳ್ಳುವಾಗ ದರ ಎಷ್ಟಿದೆ ಎಂಬ ಕುತೂಹಲ ಇರುವುದು ಮಾಮೂಲಿ. ಏಕೆಂದರೆ ಅಷ್ಟು ದುಬಾರಿ ಚಿನ್ನವನ್ನು ಕೊಳ್ಳಲು ಹೊರಟಾಗ ದರ ಕೊಂಚವಾದರೂ ಇಳಿಕೆಯತ್ತ ಸಾಗಿರಲಿ ಎಂಬ ಆಸೆ ಇದ್ದೇ ಇರುತ್ತದೆ. ಇಂದು (ನವೆಂಬರ್ 13) ನೀವು ಚಿನ್ನ (Gold Price) ಅಥವಾ ಬೆಳ್ಳಿ (Silver Price) ಖರೀದಿಸಲು ಯೋಚಿಸಿದ್ದರೆ ಎಷ್ಟಿದೆ ದರ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Pride)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,59,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,070 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,00,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇನ್ನು, ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಆಗಿದ್ದು, ಕೆಜಿ ಬೆಳ್ಳಿಗೆ 67,100 ರೂಪಾಯಿ ನಿಗದಿಯಾಗಿದೆ. ಸುಮಾರು 600 ರೂಪಾಯಿ ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,260 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,62,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 600 ರೂಪಾಯಿ ಏರಿಕೆ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,460 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,04,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 600 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ ಬೆಳ್ಳಿ ಬೆಲೆಯಲ್ಲಿಯೂ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿ ಬೆಲೆ 71,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 800 ರೂಪಾಯಿ ಏರಿಕೆ ಕಂಡು ಬಂದಿದೆ.

ಇದನ್ನೂ ಓದಿ:
Gold Price Today: ಇಂದು ಕೆಲವೆಡೆ ಚಿನ್ನದ ದರದಲ್ಲಿ ಏರಿಕೆ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿನ ದರ ವಿವರ ಪರಿಶೀಲಿಸಿ

Gold Price Today: ಇಂದು ಬೆಂಗಳೂರು ಸೇರಿ ಹಲವೆಡೆ ಚಿನ್ನದ ದರದಲ್ಲಿ ಏರಿಕೆ; ಬೆಳ್ಳಿ ಬೆಲೆ ಸ್ಥಿರ

TV9 Kannada


Leave a Reply

Your email address will not be published.