Gold Price Today: ಬೆಂಗಳೂರಿನಲ್ಲಿ ನಿನ್ನೆ ಇಳಿಕೆಯಾಗಿದ್ದ ಚಿನ್ನದ ದರ ಇಂದು ಸ್ಥಿರ, ಬೆಳ್ಳಿ ಬೆಲೆಯಲ್ಲಿ ಏರಿಕೆ | Gold Price today on 2021 november 26 check silver price in bangalore mumbai delhi and major city

Gold Price Today: ಬೆಂಗಳೂರಿನಲ್ಲಿ ನಿನ್ನೆ ಇಳಿಕೆಯಾಗಿದ್ದ ಚಿನ್ನದ ದರ ಇಂದು ಸ್ಥಿರ, ಬೆಳ್ಳಿ ಬೆಲೆಯಲ್ಲಿ ಏರಿಕೆ

ಸಂಗ್ರಹ ಚಿತ್ರ

ಬೆಂಗಳೂರು: ಚಿನ್ನ ಖರೀದಿಸಬೇಕು ಅಂದುಕೊಂಡಾಗಲೆಲ್ಲಾ ಬೆಲೆ ಇಳಿಕೆಯತ್ತ ಸಾಗಿದೆಯೇನೋ ಎಂಬ ಕುತೂಹಲ ಕೆರಳುವುದು ಮಾಮೂಲಿ. ದರ ಇಳಿಕೆಯತ್ತ ಸಾಗಿದ್ದಾಗ ಚಿನ್ನ (Gold Price), ಬೆಳ್ಳಿ ಕೊಳ್ಳುವ ನಿರೀಕ್ಷೆ ಇರುವುದೂ ತಪ್ಪಲ್ಲ. ಅಷ್ಟು ದೊಡ್ಡ ಮೌಲ್ಯದ ಆಭರಣಗಳನ್ನು ಖರೀದಿಸಲು ಪ್ಲ್ಯಾನ್​ ಮಾಡಿದ್ದರೆ ಇಂದು ಶುಕ್ರವಾರ (ನವೆಂಬರ್​ 26) ಚಿನ್ನ, ಬೆಳ್ಳಿ ದರ (Silver Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ. ನಿನ್ನೆ ಇಳಿಕೆಯಾಗಿದ್ದ ಚಿನ್ನದ ದರ ಬೆಂಗಳೂರಿನಲ್ಲಿ ಇಂದು ಸ್ಥಿರವಾಗಿದೆ. ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. ಪ್ರಮುಖ ನಗರಗಳಲ್ಲಿ ಚಿನ್ನಾಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,600 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 62,900 ರೂಪಾಯಿ ನಿಗದಿಯಾಗಿದೆ. ಸುಮಾರು 200 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,960 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 400 ರೂಪಾಯಿಯಷ್ಟು ಇಳಿಕೆ ಆಗಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,050 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,90,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 400 ರೂಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿಗೆ 67,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 200 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)
ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ಬೆಲೆ 4,47,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಕೆ ಆಗಿದ್ದು, ಕೆಜಿ ಬೆಳ್ಳಿಗೆ 67,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 200 ರೂಪಾಯಿ ಏರಿಕೆ ಕಂಡು ಬಂದಿದೆ.

ಇದನ್ನೂ ಓದಿ:

Gold Price Today: ಚಿನ್ನಾಭರಣ ಪ್ರಿಯರಿಗೆ ಸಂತೋಷದ ಸುದ್ದಿ​; ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ

Gold Price Today: ಗ್ರಾಹಕರೇ ಗಮನಿಸಿ; ಇಂದು ಸಹ ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ

TV9 Kannada

Leave a comment

Your email address will not be published. Required fields are marked *