Gold Price Today: ಬೆಳ್ಳಿ ಬೆಲೆ ಕೊಂಚ ಏರಿಕೆ; ಬೆಂಗಳೂರು, ಚೆನ್ನೈ, ಮುಂಬೈನಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? | Gold Price Today Gold Rate Unchanged on May 29 Silver Price Today


Gold Price Today: ಬೆಳ್ಳಿ ಬೆಲೆ ಕೊಂಚ ಏರಿಕೆ; ಬೆಂಗಳೂರು, ಚೆನ್ನೈ, ಮುಂಬೈನಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ?

ಚಿನ್ನದ ಬೆಲೆ

Silver Price Today: ಭಾರತದಲ್ಲಿ 2 ದಿನಗಳ ಹಿಂದೆ 24 ಕ್ಯಾರೆಟ್ ಚಿನ್ನದ ಬೆಲೆ 51,980 ರೂ. ಇದ್ದುದು 52,090 ರೂ. ಆಗಿದೆ. ನಿನ್ನೆ 650 ರೂ. ಏರಿಕೆಯಾಗಿದ್ದ ಬೆಳ್ಳಿ ಬೆಲೆ ಇಂದು ಕೇವಲ 50 ರೂ. ಏರಿಕೆಯಾಗಿದೆ.

ಬೆಂಗಳೂರು: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಳಿತವಾಗುತ್ತಲೇ ಇರುತ್ತದೆ. ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಇಂದು ಯಥಾಸ್ಥಿತಿಯಲ್ಲಿದೆ. 2 ದಿನಗಳಿಂದ ಚಿನ್ನದ ಬೆಲೆ ಬದಲಾಗಿಲ್ಲ. ಬೆಳ್ಳಿಯ ಬೆಲೆ (Silver Price) ಕೇವಲ 50 ರೂ. ಏರಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,650 ರೂ. ಇದ್ದುದು 47,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,980 ರೂ. ಇದ್ದುದು 52,090 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,800 ರೂ. ಮುಂಬೈ- 47,750 ರೂ, ದೆಹಲಿ- 47,750 ರೂ, ಕೊಲ್ಕತ್ತಾ- 47,750 ರೂ, ಬೆಂಗಳೂರು- 47,750 ರೂ, ಹೈದರಾಬಾದ್- 47,750 ರೂ, ಕೇರಳ- 47,750 ರೂ, ಪುಣೆ- 47,850 ರೂ, ಮಂಗಳೂರು- 47,750 ರೂ, ಮೈಸೂರು- 47,750 ರೂ. ಇದೆ. (Source)

TV9 Kannada


Leave a Reply

Your email address will not be published. Required fields are marked *