Gold Price Today: ಭಾರತದಲ್ಲಿ ಬೆಳ್ಳಿ ದರ 900 ರೂ. ಕುಸಿತ; ಇಂದಿನ ಚಿನ್ನದ ಬೆಲೆ ಹೀಗಿದೆ | Gold Price Today Gold Rate Unchanged on August 18 Silver Price Down


Silver Price Today: ಬೆಳ್ಳಿ ಬೆಲೆ ಇಂದು 900 ರೂ. ಕುಸಿತವಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,600 ರೂ. ಇದ್ದುದು ಇಂದು 56,700 ರೂ. ಆಗಿದೆ.

Gold Price Today: ಭಾರತದಲ್ಲಿ ಬೆಳ್ಳಿ ದರ 900 ರೂ. ಕುಸಿತ; ಇಂದಿನ ಚಿನ್ನದ ಬೆಲೆ ಹೀಗಿದೆ

ಚಿನ್ನದ ಬೆಲೆ

Image Credit source: News18

Gold Price on 19th August 2022 | ಬೆಂಗಳೂರು: ಕಳೆದ 2 ದಿನಗಳಿಂದ ಕುಸಿತವಾಗಿದ್ದ ಚಿನ್ನದ ಬೆಲೆ (Gold Rate) ಇಂದು ಕೊಂಚ ಏರಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಕೂಡ 900 ರೂ. ಕುಸಿತವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಸ್ವಲ್ಪ ಹೆಚ್ಚಳವಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,900 ರೂ. ಇದ್ದುದು 47,950 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,200 ರೂ. ಇದ್ದುದು 52,250 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,380 ರೂ. ಮುಂಬೈ- 47,900 ರೂ, ದೆಹಲಿ- 48,050 ರೂ, ಕೊಲ್ಕತ್ತಾ- 47,900 ರೂ, ಬೆಂಗಳೂರು- 47,950 ರೂ, ಹೈದರಾಬಾದ್- 47,900 ರೂ, ಕೇರಳ- 47,900 ರೂ, ಪುಣೆ- 47,930 ರೂ, ಮಂಗಳೂರು- 47,950 ರೂ, ಮೈಸೂರು- 47,950 ರೂ. ಇದೆ.

TV9 Kannada


Leave a Reply

Your email address will not be published.