Bullion Market 2023, May 26th: ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,870 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 73.05 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.
ಬೆಂಗಳೂರು: ಕಳೆದ ವಾರದಂತೆ ಚಿನ್ನದ ಬೆಲೆ (Gold and Silver Prices) ತೂಗುಯ್ಯಾಲೆ ಆಡುತ್ತಾ ಕೆಳಗೆ ಕುಸಿಯುವಂತೆ ತೋರುತ್ತಿದೆ. ಬಹುತೇಕ ವಿದೇಶ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಇಳಿದಿದೆ. ಬೆಳ್ಳಿ ಬೆಲೆಯ ಸತತ ಇಳಿಕೆಯ ಓಟ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,305 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,650 ರುಪಾಯಿಯಲ್ಲಿ ಇದೆ.
ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.
ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?
ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.