Gujarat Titans logo
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 (IPL 2022) ಹೊಸ ತಂಡ ಗುಜರಾತ್ ಟೈಟನ್ಸ್ (Gujarat Titans logo) ತನ್ನ ಲೋಗೋವನ್ನು ಅನಾವರಣಗೊಳಿಸಿದೆ. ವರ್ಚುವಲ್ ಸ್ಪೇಸ್ ಮೂಲಕ ಗುಜರಾತ್ ಫ್ರಾಂಚೈಸಿಯು ತನ್ನ ಲೋಗೋವನ್ನು ಪರಿಚಯಿಸಿದ್ದು, ತ್ರಿಕೋನಾಕಾರದಲ್ಲಿ ಈ ಲೋಗೋವನ್ನು ವಿನ್ಯಾಸಗೊಳಿಸಲಾಗಿದೆ.

Gujarat Titans logo
ಸಿವಿಸಿ ಕ್ಯಾಪಿಟಲ್ಸ್ ಮಾಲೀಕತ್ವದ ಗುಜರಾತ್ ಟೈಟನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಹಾಗೆಯೇ ತಂಡದಲ್ಲಿ ಸ್ಟಾರ್ ಆಟಗಾರರಾಗಿ ರಶೀದ್ ಖಾನ್, ಶುಭ್ಮನ್ ಗಿಲ್, ಜೇಸನ್ ರಾಯ್, ಮೊಹಮ್ಮದ್ ಶಮಿ, ಡೇವಿಡ್ ಮಿಲ್ಲರ್ ಅವರಂತಹ ಪ್ಲೇಯರ್ಸ್ ಇದ್ದಾರೆ. ಇನ್ನು ತಂಡದ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಆಟಗಾರ ಆಶಿಸ್ ನೆಹ್ರಾ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಟೈಟಾನ್ಸ್ ತಂಡದ ಮೆಂಟರ್ ಆಗಿ ಟೀಮ್ ಇಂಡಿಯಾದ ಮಾಜಿ ಕೋಚ್ ದಕ್ಷಿಣ ಆಫ್ರಿಕಾದ ಗ್ಯಾರಿ ಕರ್ಸ್ಟನ್ ಇರಲಿದ್ದಾರೆ.
🏃🏃♀️Step into the Titans Dugout! ▶️ Watch our stars unveil the logo in the metaverse! ⭐ ▶️ https://t.co/dCcIzWpM4U#GujaratTitans pic.twitter.com/9N6Cl6a3y4
— Gujarat Titans (@gujarat_titans) February 20, 2022
ಗುಜರಾತ್ ಟೈಟನ್ಸ್ (GT): ಹಾರ್ದಿಕ್ ಪಾಂಡ್ಯ, ರಶೀದ್ ಖಾನ್, ಶುಭಮನ್ ಗಿಲ್, ಮೊಹಮ್ಮದ್. ಶಮಿ, ಜೇಸನ್ ರಾಯ್, ಲಾಕಿ ಫರ್ಗುಸನ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ಡೊಮಿನಿಕ್ ಡ್ರೇಕ್ಸ್, ಜಯಂತ್ ಯಾದವ್, ವಿಜಯ್ ಶಂಕರ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ಗುರುಕೀರತ್ ಸಿಂಗ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್