HCL Recruitment 2022: 10ನೇ ತರಗತಿ ಪಾಸಾದವರಿಗೆ ಉದ್ಯೋಗ: ವೇತನ 37 ಸಾವಿರ ರೂ. | HCL Recruitment 2022 for 8 Non Executive Posts, check here in detail


HCL Recruitment 2022: ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

HCL Recruitment 2022: ಮಧ್ಯಪ್ರದೇಶದಲ್ಲಿನ ಭಾರತ ಸರ್ಕಾರದ ಹಿಂದೂಸ್ತಾನ್ ಕಾಪರ್ ಲಿಮಿಟೆಡ್ (HCL) ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಧಿಸೂಚನೆಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

ವಿವರಗಳು:

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ: 8

ಹುದ್ದೆಯ ವಿವರ: ಕಾರ್ಯನಿರ್ವಾಹಕೇತರ ಹುದ್ದೆಗಳು

ಹುದ್ದೆಗಳ ಹೆಸರು:

ಮೈನಿಂಗ್ ಮೇಟ್ ಗ್ರೇಡ್-1 : 5 ಹುದ್ದೆಗಳು
ಎಲೆಕ್ಟ್ರಿಷಿಯನ್ ಗ್ರೇಡ್-2 : 3 ಹುದ್ದೆಗಳು

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 35 ವರ್ಷಗಳನ್ನು ಮೀರಬಾರದು.

ವೇತನ ಶ್ರೇಣಿ : ತಿಂಗಳ ವೇತನ ರೂ.18180 ರಿಂದ ರೂ.37,310 ವರೆಗೆ ಸಿಗಲಿದೆ.

ವಿದ್ಯಾರ್ಹತೆ: ಯಾವುದಾದರೂ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ 10ನೇ ತರಗತಿ / ಡಿಪ್ಲೊಮಾ / ITI ಉತ್ತೀರ್ಣರಾಗಿರಬೇಕು. ಸಂಬಂಧಿತ ಕೆಲಸದಲ್ಲಿ 3 ರಿಂದ 5 ವರ್ಷಗಳ ಅನುಭವವನ್ನು ಹೊಂದಿರಬೇಕು.

ಆಯ್ಕೆ ವಿಧಾನ: ಶೈಕ್ಷಣಿಕ ಅರ್ಹತೆ / ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅಪ್ಲಿಕೇಶನ್ ವಿಧಾನ: ಆಸಕ್ತ ಅಭ್ಯರ್ಥಿಗಳು ಆಫ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬೇಕು. ಅಂದರೆ ಅಂಚೆಯ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜೂನ್ 1, 2022.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 4, 2022.

ಅರ್ಜಿ ಸಲ್ಲಿಸಬೇಕಾದ ವಿಳಾಸ:
Hindustan Copper Ltd, P.O. Malanjkhand, Dist. Balaghat Madhya Pradesh – 481116.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

TV9 Kannada


Leave a Reply

Your email address will not be published. Required fields are marked *