Hijab Row: ಅಧಿವೇಶನದಲ್ಲಿ ಹಿಜಾಬ್ ವಿವಾದ ಪ್ರಸ್ತಾಪ ಮಾಡಬೇಕು, ಬೇಡಾ: ಸಿದ್ದರಾಮಯ್ಯ- ಡಿ.ಕೆ. ಶಿವಕುಮಾರ್ ನಡುವೆ ತಿಕ್ಕಾಟ! | Hijab controversy in session arguments between Siddaramaiah and DK Shivakumar


Hijab Row: ಅಧಿವೇಶನದಲ್ಲಿ ಹಿಜಾಬ್ ವಿವಾದ ಪ್ರಸ್ತಾಪ ಮಾಡಬೇಕು, ಬೇಡಾ: ಸಿದ್ದರಾಮಯ್ಯ- ಡಿ.ಕೆ. ಶಿವಕುಮಾರ್ ನಡುವೆ ತಿಕ್ಕಾಟ!

ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ

ಬೆಂಗಳೂರು: ಹಿಜಾಬ್ ವಿಚಾರವಾಗಿ ಈಗಾಗಲೇ ರಾಜ್ಯಾದ್ಯಂತ ಚರ್ಚೆಗಳಾಗುತ್ತಿವೆ. ಹೀಗಿರುವಾಗಲೇ ಸದನದಲ್ಲಿ ಹಿಜಾಬ್(Hijab) ವಿವಾದ ಪ್ರಸ್ತಾಪ ಮಾಡುವ ವಿಚಾರವಾಗಿ ಕಾಂಗ್ರೆಸ್ ನಾಯಕರ(Congress leader) ಮಧ್ಯೆ ತಿಕ್ಕಾಟ ಶುರುವಾಗಿದೆ. ಮಾಜಿ ಸಚಿವ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಡುವೆ ತಿಕ್ಕಾಟ ಶುರುವಾಗಿದೆ. ಅಧಿವೇಶನದಲ್ಲಿ ಹಿಜಾಬ್ ವಿವಾದ ಪ್ರಸ್ತಾಪಿಸಲು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಒಲವು ತೋರಿದರೆ, ಸದನದಲ್ಲಿ ಪ್ರಸ್ತಾಪಿಸುವುದು ಬೇಡವೆಂದು ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ಹಿಜಾಬ್ ವಿಚಾರ ಪ್ರಸ್ತಾಪಿಸಿದರೆ ಪಕ್ಷಕ್ಕೆ ಹೊಡೆತ ಬೀಳಲಿದೆ. ಇದನ್ನು ಪ್ರಸ್ತಾಪಿಸಿದರೆ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗುತ್ತೇವೆ. ಇದರಿಂದ ಬಿಜೆಪಿಗೆ ಅನುಕೂಲ ಮಾಡಿಕೊಟ್ಟಂತೆ ಆಗುತ್ತದೆ. ಕೇವಲ ಈಶ್ವರಪ್ಪ ಹೇಳಿಕೆಯನ್ನು ಮಾತ್ರ ಪ್ರಸ್ತಾಪಿಸೋಣ. ಹಿಜಾಬ್ ವಿವಾದ ಪ್ರಸ್ತಾಪಿಸುವುದು ಬೇಡ ಎಂದದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ಹಿಜಾಬ್ ವಿಚಾರವಾಗಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಸುಪ್ರೀಂಕೋರ್ಟ್‌ಗೆ ಹೋಗಿದ್ದಾರೆ. ಮುಸ್ಲಿಂ ಸಮುದಾಯದ ಪರ ಎಂಬ ಸಂದೇಶ ರವಾನೆ ಮಾಡಿದ್ದಾರೆ. ಹೀಗಿರುವಾಗ ಸದನದಲ್ಲಿ ಪ್ರಸ್ತಾಪಿಸದಿದ್ದರೆ ಹೇಗೆಂಬ ವಾದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರದ್ದಾಗಿದೆ.

ಈ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಲು ಚಿಂತನೆ ನಡೆದಿದ್ದು, ಸಿಎಲ್‌ಪಿ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲು ಸದ್ಯ ಕಾಂಗ್ರೆಸ್ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಿರ್ಧಾರ ಮಾಡಿದ್ದಾರೆ.

TV9 Kannada


Leave a Reply

Your email address will not be published.