ಪ್ರಾತಿನಿಧಿಕ ಚಿತ್ರ
ತುಮಕೂರು: ಹಿಜಾಬ್ ವಿವಾದ ತಾರಕಕ್ಕೇರಿದ್ದಕ್ಕೆ ಉಪನ್ಯಾಸಕಿ ರಾಜೀನಾಮೆ ನೀಡಿದ ಘಟನೆ ತುಮಕೂರಿನಲ್ಲಿ ನಡೆದಿದೆ. ತಿಪಟೂರು ಮೂಲದ ಅತಿಥಿ ಉಪನ್ಯಾಸಕಿ ಚಾಂದಿನಿ ರಿಸೈನ್ ಹಿಜಾಬ್ ವಿವಾದ (Hijab Row) ಕಾರಣದಿಂದ ರಾಜೀನಾಮೆ ನೀಡಿದ್ದಾರೆ. ಚಾಂದಿನಿ ತುಮಕೂರಿನ ಕೆಲ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದರು. ಪ್ರತಿನಿತ್ಯ ಹಿಜಾಬ್ ಧರಿಸಿ ಕಾಲೇಜಿಗೆ ಹೋಗುತ್ತಿದ್ದರು. ಆದರೆ, ಇದೀಗ ಹಿಜಾಬ್ ವಿವಾದ ತಾರಕಕ್ಕೇರಿದ ಪರಿಣಾಮ ರಾಜೀನಾಮೆ ನೀಡಿದ್ದಾರೆ. ಜೈನ್ ಕಾಲೇಜಿನ ಅತಿಥಿ ಉಪನ್ಯಾಸಕ ಹುದ್ದೆಗೆ ರಾಜೀನಾಮೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಹಲವೆಡೆ ಕೋರ್ಟ್ ಆದೇಶವನ್ನು ತಪ್ಪಾಗಿ ಅರ್ಥೈಸಲಾಗಿದೆ: SDPI ರಾಜ್ಯಾಧ್ಯಕ್ಷ ಹೇಳಿಕೆ
ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು (Hijab Kesari Row) ಸಂಘರ್ಷ ವಿಚಾರಕ್ಕೆ ಸಂಬಂಧಿಸಿ ಉಡುಪಿಯಲ್ಲಿ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರತಿಕ್ರಿಯೆ ನೀಡಿದ್ದಾರೆ. ಹೈಕೋರ್ಟ್ನ ಮಧ್ಯಂತರ ಆದೇಶದಲ್ಲಿ ಬಹಳ ಸ್ಪಷ್ಟವಾಗಿದೆ. ಆಡಳಿತ ಮಂಡಳಿ ಸಮವಸ್ತ್ರ ಕಡ್ಡಾಯಗೊಳಿಸಿದ್ರೆ ಪಾಲಿಸಬೇಕು. ಆದೇಶದಲ್ಲಿ ಈ ಕುರಿತು ಸ್ಪಷ್ಟವಾಗಿ ಉಲ್ಲೇಖ ಮಾಡಿದ್ದಾರೆ. ಹಲವೆಡೆ ಈ ಆದೇಶವನ್ನು ತಪ್ಪಾಗಿ ಅರ್ಥೈಸಲಾಗಿದೆ. ರಾಜ್ಯ ಬಿಜೆಪಿ ಸರ್ಕಾರ ಕೋರ್ಟ್ ಆದೇಶವನ್ನು ತಿರುಚುತ್ತಿದೆ ಎಂದು ಹೇಳಿದ್ದಾರೆ.
ಈ ವಿಚಾರದಲ್ಲಿ ಹೈಕೋರ್ಟ್ ಸಿಜೆ ಮಧ್ಯಪ್ರವೇಶ ಮಾಡಬೇಕು. ಸರ್ಕಾರಕ್ಕೆ ಸಮವಸ್ತ್ರದ ಬಗ್ಗೆ ಸ್ಪಷ್ಟ ತಿಳಿವಳಿಕೆ ಕೊಡಬೇಕು. ಗೇಟ್ನಲ್ಲಿ ಪೊಲೀಸರು ವಿದ್ಯಾರ್ಥಿಗಳನ್ನು ಬೆದರಿಸುತ್ತಿದ್ದಾರೆ. ಡಿಜಿ & ಐಜಿಪಿ ಮಧ್ಯಪ್ರವೇಶ ಮಾಡಿ ಸೂಚನೆ ನೀಡಬೇಕು. ಸಂವಿಧಾನ ವಿರೋಧಿಯಾಗಿ ವಿದ್ಯಾರ್ಥಿಗಳನ್ನ ನಡೆಸಿಕೊಳ್ತಿದೆ. ಸಮಸ್ಯೆಯನ್ನು ಬಗೆಹರಿಸಿ ರಾಜ್ಯದ ಮಾನವನ್ನು ಕಾಪಾಡಿ ಎಂದು ಹೈಕೋರ್ಟ್ ಸಿಜೆ ಹಾಗೂ ಡಿಜಿ & ಐಜಿಪಿಗೆ ಅಬ್ದುಲ್ ಮಜೀದ್ ಮನವಿ ಮಾಡಿದ್ದಾರೆ.