Hyderabad: ಪಾರ್ಕಿಂಗ್​ ಲಾಟ್​ನಲ್ಲಿ ಮಲಗಿದ್ದ 2 ವರ್ಷದ ಮಗುವಿನ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಗು ಸ್ಥಳದಲ್ಲೇ ಸಾವು | Kannada News Hyderabad: 2 year old goes to sleep in Hyderabad parking lot, dies after being run over by SUV


ಹೈದರಾಬಾದ್​ನ ಅಪಾರ್ಟ್​ಮೆಂಟ್​ವೊಂದರ ಪಾರ್ಕಿಂಗ್​ಲಾಟ್​ನಲ್ಲಿ ಮಲಗಿದ್ದ 2 ವರ್ಷದ ಮಗುವಿನ ಮೇಲೆ ವ್ಯಕ್ತಿಯೊಬ್ಬ ಕಾರು ಹತ್ತಿಸಿದ ಪರಿಣಾಮ, ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.

ಹೈದರಾಬಾದ್​ನ ಅಪಾರ್ಟ್​ಮೆಂಟ್​ವೊಂದರ ಪಾರ್ಕಿಂಗ್​ಲಾಟ್​ನಲ್ಲಿ ಮಲಗಿದ್ದ 2 ವರ್ಷದ ಮಗುವಿನ ಮೇಲೆ ವ್ಯಕ್ತಿಯೊಬ್ಬ ಕಾರು ಹತ್ತಿಸಿದ ಪರಿಣಾಮ, ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಕೂಲಿ ಕೆಲಸಕ್ಕೆ ಬಂದಿದ್ದ ಮಹಿಳೆಯೊಬ್ಬರು ತನ್ನ ಎರಡು ವರ್ಷದ ಮಗಳನ್ನು ಪಾರ್ಕಿಂಗ್ ಸ್ಥಳದಲ್ಲಿ ಮಲಗಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಾಲಕಿಯನ್ನು ಗಮನಿಸದೆ ಕಾರನ್ನು ಚಲಾಯಿಸಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಾರು ಅಬಕಾರಿ ಸಬ್‌ಇನ್‌ಸ್ಪೆಕ್ಟರ್‌ಗೆ ಸೇರಿದ್ದು, ಆಕೆಯ ಪತಿ ಕಾರು ಚಲಾಯಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ: Delhi: ಸುರಂಗ ಮಾರ್ಗದಲ್ಲಿ ಅಪಘಾತ, 15 ನಿಮಿಷಗಳ ಕಾಲ ಹರಿಯಿತು ರಕ್ತದ ಕೋಡಿ, ಮಾಹಿತಿ ನೀಡಲು ನೆಟ್​ವರ್ಕ್​ ಇಲ್ಲದೆ ಜೀವ ಹೋಯ್ತು

ಈ ಬಾಲಕಿ ನಗರದಲ್ಲಿ ಕೂಲಿ ಕೆಲಸ ಮಾಡಲು ಬಂದ ಮಹಿಳೆಯೊಬ್ಬರ ಮಗಳಾಗಿದ್ದು, ಬಿಸಿಲು ತಪ್ಪಿಸಲು ವಾಹನ ನಿಲುಗಡೆ ಸ್ಥಳದಲ್ಲಿ ಮಲಗಿದ್ದಾಳೆ. ಮಗು ಪಾರ್ಕಿಂಗ್ ಸ್ಥಳದಲ್ಲಿ ನೀಲಿ ಬಣ್ಣದ ಬಟ್ಟೆಯ ಮೇಲೆ ಮಲಗಿರುವುದನ್ನು ಕಾಣಬಹುದು.

ಆಗ ಬಿಳಿ ಬಣ್ಣದ ಎಸ್‌ಯುವಿ ಅಲ್ಲಿಗೆ ಬಂದು ಮಗುವಿನ ಮೇಲೆ ಹತ್ತುತ್ತದೆ ಚಾಲಕ ತಕ್ಷಣವೇ ಏನೋ ಆಗಿದೆ ಎಂದು ಅರಿತು ಕಾರನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ, ಅಷ್ಟರಲ್ಲಾಗಲೇ ಮಗು ಸಾವನ್ನಪ್ಪಿದೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *