Hyderabad Gangrape: ಹೈದರಾಬಾದ್ ಗ್ಯಾಂಗ್​ರೇಪ್ ಪ್ರಕರಣ: ನಾಲ್ಕನೇ ಆರೋಪಿಯ ಬಂಧನ | Hyderabad Gangrape Case: Police detained Fourth Accused In the matter


Hyderabad Gangrape: ಹೈದರಾಬಾದ್ ಗ್ಯಾಂಗ್​ರೇಪ್ ಪ್ರಕರಣ: ನಾಲ್ಕನೇ ಆರೋಪಿಯ ಬಂಧನ

Hyderabad Gangrape

Image Credit source: Hindustan Times

ಜುಬಿಲಿ ಹಿಲ್ಸ್‌ನಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ( Gangrape) ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಬಂಧಿತ ನಾಲ್ಕನೇ ಆರೋಪಿ ಶಾಸಕರೊಬ್ಬರ ಮಗನಾಗಿದ್ದಾನೆ.

ಹೈದರಾಬಾದ್: ಜುಬಿಲಿ ಹಿಲ್ಸ್‌ನಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ( Gangrape) ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಬಂಧಿತ ನಾಲ್ಕನೇ ಆರೋಪಿ ಶಾಸಕರೊಬ್ಬರ ಮಗನಾಗಿದ್ದಾನೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಕ್ಫ್​ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರ ಮಗ ಸೇರಿದಂತೆ ಮೂರು ಆರೋಪಿಗಳನ್ನು ಬಂಧಿಸಲಾಗಿತ್ತು. ಐದನೇ ಆರೋಪಿ ತಲೆಮರೆಸಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಗಳೆಂದು ಗುರುತಿಸಲಾದ ಐವರ ಪೈಕಿ ಪೊಲೀಸರು ಈಗಾಗಲೇ ಸಾದುದ್ದೀನ್ ಮಲಿಕ್‌ನನ್ನು ಶುಕ್ರವಾರ ಬಂಧಿಸಿದ್ದರು. ಇನ್ನೋರ್ವ ಆರೋಪಿ ಉಮ್ರಾನ್ ಖಾನ್ ಮತ್ತು ಅಪರಾಧದಲ್ಲಿ ಭಾಗಿಯಾಗಿರುವ ಮತ್ತೊಬ್ಬ ಅಪ್ರಾಪ್ತ ಬಾಲಕ ಇನ್ನೂ ತಲೆಮರೆಸಿಕೊಂಡಿದ್ದಾನೆ.

ನಡೆದಿದ್ದೇನು?
ಜುಬಿಲಿ ಹಿಲ್ಸ್​​ನಲ್ಲಿ ಮೇ 31ರಂದು ಪಬ್​​ಗೆ ಹೋಗಿದ್ದ 17 ವರ್ಷದ ಬಾಲಕಿ ಮೇಲೆ ಸಾಮಾಹಿಕ ಅತ್ಯಾಚಾರ ಎಸಗಲಾಗಿತ್ತು. ಐವರು ಆರೋಪಿಗಳು ಕಾರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದರು. ಈ ಕೃತ್ಯದಲ್ಲಿ ಮೂವರು ಅಪ್ರಾಪ್ತ ಬಾಲಕರು ಕೂಡ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಐವರು ಆರೋಪಿಗಳ ಪೈಕಿ ಸಾದುದ್ದೀನ್​ ಮಲಿಕ್​ ಮತ್ತು ಓರ್ವ ಅಪ್ರಾಪ್ತನನ್ನು ಬಂಧಿಸಲಾಗಿತ್ತು.  ಉಮರ್​ಖಾನ್​ ಹಾಗೂ ಮತ್ತಿಬ್ಬರು ಅಪ್ತಾಪ್ತರನ್ನು ಕರ್ನಾಟಕದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಟೀಕೆ: ಈ ಅತ್ಯಾಚಾರ ಪ್ರಕರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಾದ ಕಾಂಗ್ರೆಸ್​, ಬಿಜೆಪಿ ಮತ್ತು ಜನಸೇನಾ ಪಕ್ಷಗಳು ವಾಗ್ದಾಳಿ ನಡೆಸಿವೆ. ಈ ಕೃತ್ಯಕ್ಕೆ ಪೊಲೀಸರ ನಿರ್ಲಕ್ಷ್ಯವೇ ಕಾರಣವಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್​ ಒತ್ತಾಯಿಸಿದ್ದಾರೆ.

ಕಾಂಗ್ರೆಸ್​​ ನಾಯಕ ಭಟ್ಟಿ ಕೂಡ ಟಿಆರ್​​ಎಸ್​​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಬ್​​ಗಳು ನಿಯಮ ಉಲ್ಲಂಘಿಸಿದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರದ ಈ ನಿರ್ಲಕ್ಷ್ಯದಿಂದಲೇ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಜನಸೇನಾ ಪ್ರತಿಭಟನೆಸಾಮೂಹಿಕ ಅತ್ಯಾಚಾರ: ಈ ಘಟನೆಯನ್ನು ಖಂಡಿಸಿ ಜನಸೇನಾ ಕಾರ್ಯಕರ್ತರು ಜುಬಿಲಿ ಹಿಲ್ಸ್​​ ಪೊಲೀಸ್​ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಠಾಣೆಯೊಳಗೆ ಪ್ರತಿಭಟನಾಕಾರರು ನುಗ್ಗಲು ಯತ್ನಿಸಿದ್ದಾರೆ. ಇದರಿಂದ ಸುಮಾರು 30 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

TV9 Kannada


Leave a Reply

Your email address will not be published.