I left Congress because of Siddaramaiah’s sin; Minister Dr. K. Sudhakar | ಸಿದ್ದರಾಮಯ್ಯನವರ ಪಾಪದಿಂದಲೇ ನಾನು ಕಾಂಗ್ರೆಸ್‌ ಬಿಟ್ಟೆ; ಸಚಿವ ಡಾ.ಕೆ.ಸುಧಾಕರ್


ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ನಾಯಕರ ಕೆಸರೆರೆಚಾಟ ಜೋರಾಗಿದೆ. ಅದರಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಪಾಪದಿಂದಲೇ ನಾನು ಕಾಂಗ್ರೆಸ್​ ಬಿಡಬೇಕಾಯಿತು ಎಂದು ಸಚಿವ ಡಾ.ಕೆ ಸುಧಾಕರ್​ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯನವರ ಪಾಪದಿಂದಲೇ ನಾನು ಕಾಂಗ್ರೆಸ್‌ ಬಿಟ್ಟೆ; ಸಚಿವ ಡಾ.ಕೆ.ಸುಧಾಕರ್

ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಟ್ಟಿದಾಗಲೇ ಕಾಂಗ್ರೆಸ್‌ನಲ್ಲಿರಲಿಲ್ಲ. ಜನತಾದಳದಲ್ಲಿದ್ದು ಎಲ್ಲಾ ಬಗೆಯ ಅಧಿಕಾರ ಅನುಭವಿಸಿದ ಅವರು ಅಧಿಕಾರದ ಆಸೆಗಾಗಿಯೇ ಕಾಂಗ್ರೆಸ್‌ಗೆ ಬಂದರು. ಇವರು ಮಾಡಿದ ಪಾಪದ ಕೆಲಸದಿಂದಾಗಿಯೇ ನಾನು ಕಾಂಗ್ರೆಸ್‌ ಬಿಟ್ಟು ಬಿಜೆಪಿಗೆ ಬಂದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ ಎಂದು ಅವರ‌ ಕಚೇರಿ ಸಿಬ್ಬಂದಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಕಾಂಗ್ರೆಸ್‌ನವರು ಪ್ರಜಾ ಧ್ವನಿ ಯಾತ್ರೆಯ ಹೆಸರಿನಲ್ಲಿ ನನ್ನ ವಿರುದ್ಧ ಪ್ರಚಾರ ಸಭೆ ಮಾಡಿದ್ದಾರೆ. ಆದರೆ ನಾನು ಮಾಡಿದ ಆರೋಪಗಳಿಗೆ ಒಂದೇ ಒಂದು ಉತ್ತರ ನೀಡಲು ಕಾಂಗ್ರೆಸ್‌ ನಾಯಕರಿಗೆ ಸಾಧ್ಯವಾಗಿಲ್ಲ. ಅದರ ಬದಲಿಗೆ ವೈಯಕ್ತಿಕ ಆರೋಪವನ್ನು ಮಾಡಿದ್ದಾರೆ. ಮುಖ್ಯಮಂತ್ರಿ, ಸಚಿವರಾಗಿದ್ದವರು ಪ್ರಜಾಪ್ರಭುತ್ವದಲ್ಲಿ ಹೇಗೆ ಮಾತಾಡಬೇಕೆಂದು ಮೊದಲು ಕಲಿಯಬೇಕು. ಬಾರ್‌ನಲ್ಲಿ ಕುಡಿದು ಬಂದಂತೆ ಸಭೆಯಲ್ಲಿ ಮಾತನಾಡಬಾರದು ಎಂದರು.

ತಾಜಾ ಸುದ್ದಿ

ಕಾಂಗ್ರೆಸ್‌ನಲ್ಲಿ ನನಗೆ ಟಿಕೆಟ್‌ ದೊರೆಯುವಲ್ಲಿ ಸಿದ್ದರಾಮಯ್ಯ ಅವರ ಪಾತ್ರವೇ ಇಲ್ಲ. ನನಗೆ 2013ರಲ್ಲಿ ಟಿಕೆಟ್ ಕೊಡಿಸಿದ್ದು ನನ್ನ ರಾಜಕೀಯ ಗುರುಗಳಾದ ಎಸ್‌.ಎಂ.ಕೃಷ್ಣ ಹಾಗೂ ಡಾ.ಜಿ.ಪರಮೇಶ್ವರ್‌ ಅವರು. ನಾನು ಸಿದ್ದರಾಮಯ್ಯ ಅವರ ಬಳಿ ಟಿಕೆಟ್​ಗಾಗಿ ಏನೂ ಸಹಾಯ ಕೇಳಿಯೇ ಇಲ್ಲ. ಶಾಸಕನಾದ ಬಳಿಕ ನನ್ನನ್ನು ವಿಶ್ವಾಸದಿಂದ ನೋಡಿದ್ದಾರೆ. ಆಗ ನಾನೂ ಅವರನ್ನು ಸಮರ್ಥನೆ ಮಾಡಿದ್ದೆ. ಆದರೆ ತಪ್ಪು ಮಾಡಿದಾಗ ಅದನ್ನು ನೇರವಾಗಿ ಖಂಡಿಸಿದ್ದೇನೆ ಎಂದಿದ್ದಾರೆ.

ಚುನಾಯಿತ ಪ್ರತಿನಿಧಿಗಳು ತಮ್ಮ ಗೌರವವನ್ನು ಕಾಪಾಡಿಕೊಳ್ಳಬೇಕು. ಆದರೆ ಆ ಎಲ್ಲಾ ಗುಣಮಟ್ಟ ಬಿಟ್ಟು ಕೀಳಾಗಿ ಮಾತನಾಡಿದ್ದಾರೆ ಎಂದು ಕಿಡಿಕಾರಿದ ಸಚಿವ ಡಾ.ಕೆ ಸುಧಾಕರ್​

ಮಾಜಿ ಸಿಎಂ ಸಿದ್ದರಾಮಯ್ಯನವರು ಕಾಂಗ್ರೆಸ್‌ ಪಕ್ಷದಲ್ಲಿ ಮೊದಲಿನಿಂದಲೂ ಇದ್ದರೇ? ಅವರು ಮೊದಲು ಜನತಾದಳದಲ್ಲಿದ್ದು ಅದೇ ಪಕ್ಷದ ಸಚಿವ, ಉಪಮುಖ್ಯಮಂತ್ರಿಯಾದರು. ಅಂದಮೇಲೆ ಕಾಂಗ್ರೆಸ್​ಗೆ ಏಕೆ ಬಂದರು? ಆಶಯಕ್ಕಾ? ಬದ್ಧತೆಗಾ? ಇವರು ಮಾತ್ರ ಬಹಳ ಪವಿತ್ರರು, ನಾವೆಲ್ಲರೂ ಅಪವಿತ್ರರಾ? ಇಷ್ಟು ವಯಸ್ಸಾಗಿರುವವರೇ ಹೀಗೆ ಮಾಡುವಾಗ ಯುವಕರಾದವರು ನಾವೇನು ಮಾಡಬೇಕು? ಸಿದ್ದರಾಮಯ್ಯನವರು ಕಳೆದ ಚುನಾವಣೆಯಲ್ಲಿ ಗೆದ್ದ ಬಳಿಕ, ಅನೈತಿಕವಾಗಿ ಜೆಡಿಎಸ್‌ ಜೊತೆ ಸೇರಿ ಸರ್ಕಾರ ರಚಿಸಲು ನಮ್ಮನ್ನು ಬಲಿಪಶು ಮಾಡಿದ್ದರು. ನಾನು ನನ್ನ ಫಲಿತಾಂಶ ನೋಡಿ ದೇವನಹಳ್ಳಿಗೆ ಹೋಗುವ ವೇಳೆಗೆ ಸಿದ್ದರಾಮಯ್ಯನವರು ಜನತದಾಳದ ಕೈ ಹಿಡಿದುಕೊಂಡುಬಿಟ್ಟಿದ್ದರು. ಇದು ಸರಿಯಲ್ಲ, ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು ಸ್ಪಷ್ಟವಾಗಿ ಹೇಳಿದ್ದೆ. ಸಿದ್ದರಾಮಯ್ಯನವರ ಮನೆಗೆ ಹೋಗಿ ಮಾತನಾಡಿದಾಗ ರಾಹುಲ್‌ ಗಾಂಧಿಯವರ ಮಾತಿನಂತೆ ಒಪ್ಪಿಕೊಂಡು ಬಿಟ್ಟಿದ್ದೇನೆ ಎಂದು ಹೇಳಿದ್ದರು. ಆದರೆ ನಾವೇನೂ ಒಪ್ಪಿಕೊಳ್ಳಬೇಕು ಎಂದೇನಿಲ್ಲ ಎಂದಿದ್ದರು.

ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್‌ ಕಾಲೇಜು ತಾವೇ ತಂದಿದ್ದು ಎಂದು ಹೇಳಿಕೊಂಡಿದ್ದಾರೆ. ಇಲ್ಲಿ ಬಂದು ಆರು ವರ್ಷದ ಮಗುವನ್ನು ಕೇಳಿದರೂ ಯಾರು ಈ ಯೋಜನೆ ತಂದಿದ್ದು ಎಂದು ಹೇಳುತ್ತದೆ. ಎಚ್‌ಎನ್‌ ವ್ಯಾಲಿ ಬಗ್ಗೆ ಇವರನ್ನೂ ಸೇರಿ ಶಿವಶಂಕರರೆಡ್ಡಿ ಹಾಗೂ ರಮೇಶ್‌ಕುಮಾರ್‌ ಅವರಿಗೂ ಗೊತ್ತೇ ಇರಲಿಲ್ಲ. ಇದೇ ಸಿದ್ದರಾಮಯ್ಯನವರು ಎಚ್‌ಎನ್‌ ವ್ಯಾಲಿ ಯೋಜನೆ ಜಾರಿಯಾಗಲು ಸುಧಾಕರ್‌ ಕಾರಣ ಎಂದು ಇಲ್ಲಿಗೇ ಬಂದು ಭಾಷಣ ಮಾಡಿದ್ದರು. ಅಂದು ಒಂದು ಮಾತನಾಡುತ್ತಾರೆ, ಈಗ ಮತ್ತೊಂದು ಮಾತನಾಡುತ್ತಾರೆ. ಭಾಷಣ ಮಾಡಲಿ ಆದರೆ ಅದರಲ್ಲಿ ಸತ್ಯ ಇರಬೇಕು ಎಂದರು.

TV9 Kannada


Leave a Reply

Your email address will not be published. Required fields are marked *