ಮುಂಬೈ: ಬಾಲಿವುಡ್ ನಟ ಸೋನು ಸೂದ್ IAS ಕಾಂಕ್ಷಿಗಳಿಗೆ ಫ್ರೀ ಕೋಚಿಂಗ್ ಆಫರ್ ನೀಡುವ ಮೂಲಕವಾಗಿ ಮತ್ತೊಂದು ನೆರವನ್ನು ನೀಡುವ ಮೂಲಕವಾಗಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇತ್ತ ಅಭಿಮಾನಿಗಳು ಸೋನು ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡುವಂತೆ ಒತ್ತಾಯಿಸುತ್ತಿದ್ದಾರೆ.

ಕೊರೊನಾ ಬಂದಾಗಿನಿಂದ ಹಾಗೂ ಲಾಕ್‍ಡೌನ್ ಆದಾಗಿನಿಂದ ಸಾಮನ್ಯ ಜನರಿಗೆ ವಾಲಿವುಡ್ ನಟ ಸೋನು ಸೂದ್ ಒಂದಿಲ್ಲೊಂದು ಸಹಾಯ ಮಾಡುತ್ತ ಬಂದಿದ್ದಾರೆ. ಇದೀಗ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಸಹಾಯಹಸ್ತ ಚಾಚಿದ್ದಾರೆ. ಇದನ್ನೂ ಓದಿ :700 ಕಿ.ಮೀ ಪಾದಯಾತ್ರೆ ಮಾಡಿದ ಅಭಿಮಾನಿ – ಮೆಚ್ಚುಗೆ ಜೊತೆಗೆ ಸೋನು ಬುದ್ಧಿವಾದ

ದೆಹಲಿಯ ಯುವ ಸಂಘಟನೆಯ ದಿಯಾ ಹಾಗೂ ಸೋನು ಸೂದ್ ಒಟ್ಟಾಗಿ ಸಂಭವಂ ಎಂಬ ಯೋಜನೆ ಒಂದನ್ನು ಲಾಂಚ್ ಮಾಡಿದ್ದಾರೆ. ಇದರ ಅಡಿಯಲ್ಲಿ ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳನ್ನ ಎದುರಿಸಲು ಸಿದ್ಧವಾಗುತ್ತಿರುವ ಆಕಾಂಕ್ಷಿಗಳಿಗೆ ಉಚಿತವಾಗಿ ಕೋಚಿಂಗ್ ಸ್ಕಾಲರ್ ಶಿಪ್ ನೀಡಲಾಗುತ್ತದೆ.

ಐಎಎಸ್ ತಯಾರಿ ಮಾಡಬೇಕಾ ನೀವು? ಕೋಚೀಂಗ್ ಪಡೆಯಲು ಬಯಸುವವರು www.SoodCharityFoundation.org ನಲ್ಲಿ ರಿಜಿಸ್ಟ್ರೇಷನ್ ಮಾಡಿಕೊಳ್ಳಬೇಕು. ಜೂನ್ 30 ರಿಜಿಸ್ಟ್ರೇಷನ್‍ಗೆ ಕೊನೆಯ ದಿನವಾಗಿದೆ ಎಂದು ಸೋನು ಸೂದ್ ಟ್ವೀಟ್ ಮಾಡಿದ್ದಾರೆ.

ಸೋನು ಸೂದ್‍ಗೆ ಪದ್ಮವಿಭೂಷಣ ಪ್ರಶಸ್ತಿ ನೀಡುವಂತೆ ನೆಟ್ಟಿಗರ ಒತ್ತಾಯ:

ತೆರೆಮೇಲೆ ಅನೇಕ ಸಿನಿಮಾಗಳಲ್ಲಿ ಖಳನಾಯಕನಾಗಿ ಅಭಿನಯಿಸಿರುವ ನಟ ಸೋನು ಸೂದ್ ನಿಜ ಜೀವನದಲ್ಲಿ ಹಲವರ ಪಾಲಿಗೆ ರಿಯಲ್ ಹೀರೋ ಆಗಿದ್ದಾರೆ. ಕಳೆದ ಬಾರಿ ಕೋವಿಡ್ ಲಾಕ್‍ಡೌನ್ ವೇಳೆ ನೂರಾರು ವಲಸೆ ಕಾರ್ಮಿಕರ ಕಷ್ಟಕ್ಕೆ ಮಿಡಿದ ಸೋನು ಸೂದ್ ಈ ಬಾರಿ ಸೋಂಕಿತರ ಜೀವ ಉಳಿಸಲು ಹಗಲು ರಾತ್ರಿ ಎನ್ನದೆ ಶ್ರಮ ವಹಿಸಿದ್ದದ್ದಾರೆ. ಮಾನವೀಯತೆ ಮೆರೆದ ಸೋನು ಸೂದ್‍ಗೆ ಭಾರತದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಪದ್ಮವಿಭೂಷಣ’ ನೀಡುವಂತೆ ನೆಟ್ಟಿಗರು ಒತ್ತಾಯಿಸಿದ್ದಾರೆ.

ನಟ ಸೋನು ಸೂದ್‍ಗೆ ‘ಪದ್ಮವಿಭೂಷಣ’ ಪ್ರಶಸ್ತಿ ನೀಡಬೇಕೆಂದು ನೆಟ್ಟಿಗರು  #PadmaVibhushanForSonuSood ಹ್ಯಾಶ್‍ಟ್ಯಾಗ್ ಟ್ರೆಂಡ್ ಮಾಡುತ್ತಿದ್ದಾರೆ. ಅನೇಕರಿಗೆ ಸಹಾಯ ಮಾಡಿರುವ ಸೋನು ಸೂದ್‍ರನ್ನ ಗುರುತಿಸಿ ಭಾರತ ಸರ್ಕಾರ ಪದ್ಮವಿಭೂಷಣ ಪುರಸ್ಕಾರ ನೀಡಲೇಬೇಕು ಎಂದು ಟ್ವೀಟಿಗರೊಬ್ಬರು ಟ್ವೀಟ್ ಮಾಡಿದ್ದಾರೆ.

135 ಕೋಟಿ ಭಾರತೀಯರ ಪ್ರೀತಿಯೇ ನನಗೆ ಅತ್ಯಂತ ದೊಡ್ಡ ಪ್ರಶಸ್ತಿ. ಇದನ್ನು ನಾನು ಈಗಾಗಲೇ ಸ್ಕೀಕರಿಸಿದ್ದೇನೆ ಎಂದು ಸೋನು ಟ್ವೀಟ್ ಮಾಡಿ ಎಲ್ಲರ ಹೃದಯ ಗೆದ್ದಿದ್ದಾರೆ.

The post IAS ಆಕಾಂಕ್ಷಿಗಳಿಗೆ ಫ್ರೀ ಕೋಚಿಂಗ್ ಆಫರ್ ನೀಡಿದ ಸೋನು ಸೂದ್ appeared first on Public TV.

Source: publictv.in

Source link