ಐಸಿಸಿ ಬಿಡುಗಡೆ ಮಾಡಿರುವ ನೂತನ ಟಿ20 ಬ್ಯಾಟಿಂಗ್ ಱಂಕಿಂಗ್ ಪಟ್ಟಿಯಲ್ಲಿ ಭಾರತದ ಓಪನರ್ ಕೆ.ಎಲ್. ರಾಹುಲ್ ಐದನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಈ ನಡುವೆ ವಿರಾಟ್ ಕೊಹ್ಲಿ, ಎಂಟನೇ ಸ್ಥಾನಕ್ಕೆ ಕುಸಿದಿದ್ದಾರೆ.
ಇನ್ನು, ಈ ವಿಭಾಗದಲ್ಲಿ ಪಾಕಿಸ್ತಾನದ ಬಾಬರ್ ಅಝಂ ಅಗ್ರಸ್ಥಾನದಲ್ಲಿದ್ದು, ಇಂಗ್ಲೆಂಡ್‌ನ ಡೇವಿಡ್ ಮಲಾನ್ ಹಾಗೂ ದಕ್ಷಿಣ ಆಫ್ರಿಕಾದ ಏಡೆನ್ ಮಾರ್ಕರಮ್ ಅನುಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನಗಳನ್ನು ಹಂಚಿಕೊಂಡಿದ್ದಾರೆ.
ಆಸ್ಟ್ರೇಲಿಯಾದ ನಾಯಕ ಆ್ಯರೋನ್ ಫಿಂಚ್ ನಾಲ್ಕನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಟಿ20 ವಿಶ್ವಕಪ್ನಲ್ಲಿ ಸೂಪರ್-12 ಹಂತದ ಕೊನೆಯ ಮೂರು ಪಂದ್ಯಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿರುವುದು ರಾಹುಲ್‌ಗೆ ನೆರವಾಗಿದೆ. ಹೀಗಾಗಿ ಮೂರು ಸ್ಥಾನವನ್ನ ಏರಿಕೆ ಕಂಡಿದ್ದಾರೆ.
ಇದನ್ನೂ ಓದಿ: ಇಂದು ಪಾಕ್ ವಿರುದ್ಧ ಆಸ್ಟ್ರೇಲಿಯಾ ಗೆಲ್ಲೋದು ಪಕ್ಕಾ; ಹೀಗೆ ಹೇಳುತ್ತಿದೆ ಪಿಚ್ ರಿಪೋರ್ಟ್
ಇನ್ನೊಂದೆಡೆ ವಿರಾಟ್ ಕೊಹ್ಲಿ ಪರಿಣಾಮಕಾರಿ ಎನಿಸಿಕೊಳ್ಳುವಲ್ಲಿ ವಿಫಲರಾಗಿದ್ದು, ನಾಲ್ಕು ಸ್ಥಾನ ಕುಸಿದ್ದಿದ್ದಾರೆ. ಇದರಿಂದ 8ನೇ ಸ್ಥಾನದಲ್ಲಿದ್ದಾರೆ.