ICC T20 Rankings: ಕೆರಿಬಿಯನ್​ ನಾಡಲ್ಲಿ ಸೂರ್ಯ ಸ್ಫೋಟ, ಟಿ20 ರ‍್ಯಾಂಕಿಂಗ್​ನಲ್ಲಿ 2ನೇ ಸ್ಥಾನ! ನಲುಗಿದ ಬಾಬರ್ ಸಿಂಹಾಸನ | Suryakumar Yadav Rises To Second Spot In ICC Mens T20I Rankings


Suryakumar Yadav: ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ 20 ಪಂದ್ಯದಲ್ಲಿ ಅದ್ಭುತ ಇನ್ನಿಂಗ್ಸ್ ಆಡಿದ ಸೂರ್ಯಕುಮಾರ್ ಯಾದವ್ ಶೀಘ್ರದಲ್ಲೇ ಈ ಸ್ವರೂಪದ ನಂಬರ್ 1 ಬ್ಯಾಟ್ಸ್‌ಮನ್ ಆಗುವತ್ತಾ ದಾಪುಗಾಲಿಟ್ಟಿದ್ದಾರೆ. ಇತ್ತೀಚಿನ ಐಸಿಸಿ ಟಿ20 ಶ್ರೇಯಾಂಕವನ್ನು ಪ್ರಕಟಿಸಲಾಗಿದ್ದು, ಇದರಲ್ಲಿ ಸೂರ್ಯಕುಮಾರ್ ಎರಡನೇ ಸ್ಥಾನಕ್ಕೆ ತಲುಪಿದ್ದಾರೆ.

ICC T20 Rankings: ಕೆರಿಬಿಯನ್​ ನಾಡಲ್ಲಿ ಸೂರ್ಯ ಸ್ಫೋಟ, ಟಿ20 ರ‍್ಯಾಂಕಿಂಗ್​ನಲ್ಲಿ 2ನೇ ಸ್ಥಾನ! ನಲುಗಿದ ಬಾಬರ್ ಸಿಂಹಾಸನ

Babar Azam, Suryakumar Yadav

Image Credit source: insidesport

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ 20 ಪಂದ್ಯದಲ್ಲಿ ಅದ್ಭುತ ಇನ್ನಿಂಗ್ಸ್ ಆಡಿದ ಸೂರ್ಯಕುಮಾರ್ ಯಾದವ್ ಶೀಘ್ರದಲ್ಲೇ ಈ ಸ್ವರೂಪದ ನಂಬರ್ 1 ಬ್ಯಾಟ್ಸ್‌ಮನ್ ಆಗುವತ್ತಾ ದಾಪುಗಾಲಿಟ್ಟಿದ್ದಾರೆ. ಇತ್ತೀಚಿನ ಐಸಿಸಿ ಟಿ20 ಶ್ರೇಯಾಂಕವನ್ನು ಪ್ರಕಟಿಸಲಾಗಿದ್ದು, ಇದರಲ್ಲಿ ಸೂರ್ಯಕುಮಾರ್ ಎರಡನೇ ಸ್ಥಾನಕ್ಕೆ ತಲುಪಿದ್ದಾರೆ. ಸೂರ್ಯಕುಮಾರ್ ಎರಡು ಸ್ಥಾನಗಳ ಜಿಗಿದು 2ನೇ ಸ್ಥಾನದಲ್ಲಿದ್ದಾರೆ.ನಂಬರ್ 1 ಸ್ಥಾನದಲ್ಲಿ ಬಾಬರ್ ಅಜಮ್‌ ಇದ್ದು ಅವರು ಕೇವಲ 2 ರೇಟಿಂಗ್ ಪಾಯಿಂಟ್‌ಗಳ ಅಂತರದಲ್ಲಿ ಸೂರ್ಯನಿಗಿಂತ ಮುಂದಿದ್ದಾರೆ ಎಂಬುದು ಗಮನಿಸಬೇಕಾದ ವಿಚಾರ. ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಮತ್ತೊಂದು ಉತ್ತಮ ಇನ್ನಿಂಗ್ಸ್ ಆಡಿದರೆ ನಂ.1 ಸ್ಥಾನಕ್ಕೆ ಸುಲಭವಾಗಿ ಏರಲಿದ್ದಾರೆ.

ICC ಇತ್ತೀಚಿನ T20 ಶ್ರೇಯಾಂಕ

ಇತ್ತೀಚಿನ ಐಸಿಸಿ ಟಿ20 ಶ್ರೇಯಾಂಕದ ಪ್ರಕಾರ, ಬಾಬರ್ ಅಜಮ್ 818 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಸೂರ್ಯಕುಮಾರ್ ಯಾದವ್ 816 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಮೊಹಮ್ಮದ್ ರಿಜ್ವಾನ್ 794 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಐಡೆನ್ ಮಾರ್ಕ್ರಾಮ್ ನಾಲ್ಕನೇ ಸ್ಥಾನದಲ್ಲಿದ್ದಾರೆ ಮತ್ತು ಡೇವಿಡ್ ಮಲಾನ್ ಐದನೇ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *