ಮುಂಬೈ; ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರಿಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಇನ್ನೂ 8-10 ದಿನಗಳ ಕಾಲ ಅವರು ವೈದ್ಯರ ಪರಿಶೀಲನೆಯಲ್ಲೇ ಇರಲಿದ್ದಾರೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಎಂದು ವೈದ್ಯರು ತಿಳಿಸಿದ್ದಾರೆ.
ಲತಾ ಅವರಿಗೆ ಈ ತಿಂಗಳ ಆರಂಭದಲ್ಲಿ ಕೆಲ ರೋಗಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗ ಕೊರೊನಾ ಇರುವುದು ಪತ್ತೆಯಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
1932 ಅಂದರೇ ತಮ್ಮ 13ನೇ ವಯಸ್ಸಿಗೆ ಗಾಯನವನ್ನು ಆರಂಭಿಸಿದ್ದ ಲತಾ ಮಂಗೇಶ್ಕರ್ ಅವರು 30 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಸಂಗೀತ ಕ್ಷೇತ್ರಕ್ಕೆ ಅವರ ಕೊಡುಗೆಯನ್ನು ಗುರಿತಿಸಿದ ಸರ್ಕಾರ ಪದ್ಮ ಭೂಷಣ, ಪದ್ಮ ವಿಭೂಷಣ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಿದೆ.