IMA ವಂಚನೆ ಕೇಸ್: ರೋಷನ್ ಬೇಗ್ ಆಸ್ತಿ ಜಪ್ತಿ ಮಾಡಿದ ರಾಜ್ಯ ಸರ್ಕಾರ

IMA ವಂಚನೆ ಕೇಸ್: ರೋಷನ್ ಬೇಗ್ ಆಸ್ತಿ ಜಪ್ತಿ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಐಎಂಎ ಸಂಸ್ಥೆಯಿಂದ ಗ್ರಾಹಕರಿಗೆ ಬಹುಕೋಟಿ ವಂಚನೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ರೋಷನ್ ಬೇಗ್ ಆಸ್ತಿ ಜಪ್ತಿ ಮಾಡಿದೆ. ರೋಷನ್ ಬೇಗ್​ಗೆ ಸೇರಿದ ಸ್ಥಿರಾಸ್ತಿ, ಬ್ಯಾಂಕ್ ಅಕೌಂಟ್ ಜಪ್ತಿ ಮಾಡಲಾಗಿದೆ ಎಂದು ರಾಜ್ಯ ಸರ್ಕಾರದ ಕಡೆಯಿಂದ ಹೈಕೋರ್ಟ್​ಗೆ ಮಾಹಿತಿ ನೀಡಲಾಗಿದೆ.

ಇನ್ನು ಐಎಂಎಯಿಂದ ಸರ್ಕಾರಿ ಶಾಲೆಗೆ 10 ಕೋಟಿ ದೇಣಿಗೆ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ತರಾಟೆ ತೆಗೆದುಕೊಂಡಿದೆ. ದೇಣಿಗೆ ನೀಡಿರುವುದರಿಂದ ಹಿಂದಿರುಗಿಸಲು ಸಾಧ್ಯವಿಲ್ಲ ಎಂದು ಸರ್ಕಾರಿ ವಕೀಲ ವಿಜಯ್ ಕುಮಾರ್ ಪಾಟೀಲ್ ವಾದ ಮಂಡಿಸಿದರು.. ಈ ವೇಳೆ ಶಾಸಕರ ಆಸ್ತಿ ಜಪ್ತಿ ಮಾಡಲು ವಿಳಂಬ ಮಾಡಿದ್ದೀರಿ.? ಅರ್ಧ ಡಜನ್ ಆದೇಶ ನೀಡಿದ ನಂತರ ಜಪ್ತಿ ಮಾಡಿದ್ದೀರಾ.. ಈಗ ಸರ್ಕಾರಿ ಶಾಲೆಗೆ ನೀಡಿದ ದೇಣಿಗೆ ಹಿಂತಿರುಗಿಸಿಲ್ಲ ಅಂತೀರಾ.? ಠೇವಣಿದಾರರ ಹಣ ದೇಣಿಗೆ ಪಡೆದಿರುವುದು ಸರಿಯೇ.? ಐಎಂಎ ಬಗ್ಗೆ ಮೃದು ಧೋರಣೆ ತಳೆದಿದ್ದೀರಿ.? ಸರ್ಕಾರ ಸಕ್ಷಮ ಪ್ರಾಧಿಕಾರದೊಂದಿಗೆ ಸಹಕರಿಸುತ್ತಿಲ್ಲ ಎಂದು ಹೈಕೋರ್ಟ್ ತರಾಟೆ ತೆಗೆದುಕೊಂಡಿದ್ದು ದೇಣಿಗೆ ಹಿಂತಿರುಗಿಸುವ ಬಗ್ಗೆ ನಿಲುವು ತಿಳಿಸಲು ಸೂಚನೆ ನೀಡಿ ವಿಚಾರಣೆಯನ್ನ ಜುಲೈ 19 ಕ್ಕೆ ಮುಂದೂಡಿದೆ.

The post IMA ವಂಚನೆ ಕೇಸ್: ರೋಷನ್ ಬೇಗ್ ಆಸ್ತಿ ಜಪ್ತಿ ಮಾಡಿದ ರಾಜ್ಯ ಸರ್ಕಾರ appeared first on News First Kannada.

Source: newsfirstlive.com

Source link