ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾನುವಾರ ಎಡ್ಜ್ಬಾಸ್ಟನ್ನಲ್ಲಿ ನಡೆದ ಫೈನಲ್ನಲ್ಲಿ ಟಿ20 ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ರೋಚಕ ಪಂದ್ಯದಲ್ಲಿ ಭಾರತವನ್ನು 9 ರನ್ಗಳಿಂದ ಸೋಲಿಸಿತು. ಇದರೊಂದಿಗೆ ಆಸ್ಟ್ರೇಲಿಯಾ ಐತಿಹಾಸಿಕ ಚಿನ್ನದ ಪದಕವನ್ನು ಗೆದ್ದುಕೊಂಡಿತು. ಆಸ್ಟ್ರೇಲಿಯಾ ವಿರುದ್ಧ ಸತತ ಎರಡನೇ ಬಾರಿ ಟಿ20 ಫೈನಲ್ನಲ್ಲಿ ಸೋತ ಭಾರತ ತಂಡ ಬೆಳ್ಳಿ ಪದಕ ಗೆದ್ದುಕೊಂಡಿತು.
ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ಆಗಸ್ಟ್ 7 ರಂದು ನಡೆದ ಫೈನಲ್ನಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಸ್ಟಾರ್ ಓಪನರ್ ಬೆಥ್ ಮೂನಿ ಅವರ ಅತ್ಯುತ್ತಮ ಅರ್ಧಶತಕ ಮತ್ತು ನಾಯಕಿ ಮೆಗ್ ಲ್ಯಾನಿಂಗ್ ಅವರ ದೊಡ್ಡ ಜೊತೆಯಾಟದ ಆಧಾರದ ಮೇಲೆ ಆಸ್ಟ್ರೇಲಿಯಾ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು. ಭಾರತೀಯ ಬೌಲರ್ಗಳ ಬಿಗಿ ಪ್ರದರ್ಶನ ಮತ್ತು ರಾಧಾ ಯಾದವ್ ಮತ್ತು ದೀಪ್ತಿ ಶರ್ಮಾ ಅವರ ಅಮೋಘ ಕ್ಯಾಚ್ಗಳಿಂದಾಗಿ ಭಾರತ ತಂಡ ಆಸ್ಟ್ರೇಲಿಯಾ ಬಿಗ್ ಸ್ಕೋರ್ ಮಾಡದಂತೆ ತಡೆಯಿತು.
ಈ ಗುರಿಯನ್ನು ಬೆನ್ನಟ್ಟಿದ ಭಾರತದ ಆರಂಭ ಅತ್ಯಂತ ಕಳಪೆಯಾಗಿತ್ತು. ಗುಂಪು ಹಂತ ಮತ್ತು ಸೆಮಿಫೈನಲ್ಗಳಲ್ಲಿ ಸ್ಫೋಟಕ ಇನ್ನಿಂಗ್ಸ್ಗಳನ್ನು ಆಡಿದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಈ ಬಾರಿ ಬೇಗನೆ ಪೆವಿಲಿಯನ್ ಸೇರಿದರು. ಜೊತೆಗೆ ಶೆಫಾಲಿ ವರ್ಮಾ ಕೂಡ ಹೆಚ್ಚು ಕಾಲ ಉಳಿಯಲಿಲ್ಲ. ಕೇವಲ 22 ರನ್ ಗಳಿಗೆ 2 ವಿಕೆಟ್ ಕಳೆದುಕೊಂಡ ಭಾರತ ತಂಡಕ್ಕೆ ದೊಡ್ಡ ಹಾಗೂ ವೇಗದ ಜೊತೆಯಾಟದ ಅಗತ್ಯವಿತ್ತು. ನಾಯಕಿ ಹರ್ಮನ್ಪ್ರೀತ್ ಕೌರ್ ಮತ್ತು ಜೆಮಿಮಾ ರೋಡ್ರಿಗಸ್ ಈ ಜವಾಬ್ದಾರಿಯನ್ನು ನಿರ್ವಹಿಸಿದರು. ರೋಡ್ರಿಗಸ್ ನಿಧಾನವಾಗಿ ಆಡುವುದನ್ನು ಮುಂದುವರೆಸಿದರು, ಆದರೆ ಒಂದು ತುದಿಯಿಂದ ಕ್ಯಾಪ್ಟನ್ ಕೌರ್ ತನ್ನ ಆಕ್ರಮಣಕಾರಿ ಶೈಲಿಯನ್ನು ತೋರಿಸುವುದನ್ನು ಮುಂದುವರೆಸಿದರು.
ಈ ಕ್ರೀಡಾಕೂಟದ ಮೊದಲ ಪಂದ್ಯದ ಮುಖಾಮುಖಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಉತ್ತಮ ಅರ್ಧಶತಕ ಗಳಿಸಿದ್ದ ಹರ್ಮನ್ಪ್ರೀತ್ ಮತ್ತೊಮ್ಮೆ ತನ್ನ ಅದ್ಭುತ ಆಟ ಪ್ರದರ್ಶಿಸಿ ಕೇವಲ 33 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು.