IND vs ENG: ಇಂಗ್ಲೆಂಡ್ ತಂಡಕ್ಕೆ ಬಿಗ್ ಶಾಕ್; ತಂಡದ ಸ್ಟಾರ್ ವೇಗಿಗೆ ಇಂಜುರಿ..! ಆಡುವುದು ಅನುಮಾನ – Chris Jordan set to play Englands World Cup semi final with Mark Wood struggling


T20 World Cup 2022: ಮಾರ್ಕ್​ವುಡ್ ವೇಗದ ಎಸೆತಗಳಿಗೆ ಹೆಸರುವಾಸಿಯಾಗಿದ್ದು, ಈ ಟೂರ್ನಿಯಲ್ಲಿ 154.74kph ವೇಗದಲ್ಲಿ ಬೌಲಿಂಗ್ ಮಾಡಿ ದಾಖಲೆ ನಿರ್ಮಿಸಿದ್ದಾರೆ.

IND vs ENG: ಇಂಗ್ಲೆಂಡ್ ತಂಡಕ್ಕೆ ಬಿಗ್ ಶಾಕ್; ತಂಡದ ಸ್ಟಾರ್ ವೇಗಿಗೆ ಇಂಜುರಿ..! ಆಡುವುದು ಅನುಮಾನ

ಮಾರ್ಕ್​ವುಡ್​ಗೆ ಇಂಜುರಿ

ಟಿ20 ವಿಶ್ವಕಪ್​ನ (T20 World Cup 2022) ಎರಡನೇ ಸೆಮಿಫೈನಲ್ ಪಂದ್ಯ ಇಂದು ಟೀಮ್ ಇಂಡಿಯಾ ಮತ್ತು ಇಂಗ್ಲೆಂಡ್ ( India and England) ನಡುವೆ ನಡೆಯಲಿದೆ. ಇಂದಿನ ಪಂದ್ಯದಲ್ಲಿ ಅಡಿಲೇಡ್ ಮೈದಾನದಲ್ಲಿ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಹಣಾಹಣಿಯನ್ನು ಪ್ರೇಕ್ಷಕರು ಕಣ್ತುಂಬಿಕೊಳ್ಳಲಿದ್ದಾರೆ. ಇಂದು ಮಧ್ಯಾಹ್ನ 1.30ಕ್ಕೆ ಆರಂಭವಾಗಲಿರುವ ಪಂದ್ಯದತ್ತ ಎಲ್ಲಾ ಕ್ರಿಕೆಟ್ ಅಭಿಮಾನಿಗಳು ಗಮನ ಹರಿಸಿದ್ದಾರೆ. ನಿನ್ನೆ ನಡೆದ ಸೆಮಿಫೈನಲ್‌ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಈಗಾಗಲೇ ಫೈನಲ್ ತಲುಪಿದೆ.

ಮಾರ್ಕ್​ವುಡ್​ಗೆ ಇಂಜುರಿ

ಇಂದು ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯ ಆರಂಭಕ್ಕೂ ಮುನ್ನ ಇಂಗ್ಲೆಂಡ್ ತಂಡಕ್ಕೆ ಆಘಾತ ಎದುರಾಗಿದ್ದು, ತಂಡದ ಸ್ಟಾರ್ ವೇಗದ ಬೌಲರ್​ ಇಂಜುರಿಗೊಂಡಿದ್ದಾರೆ ಎಂದು ವರದಿಯಾಗಿದೆ. ಇಂಗ್ಲೆಂಡ್ ತಂಡದ ಪ್ರಮುಖ ಬೌಲರ್ ಮಾರ್ಕ್​ವುಡ್ ಗಾಯಗೊಂಡಿದ್ದು, ಅವರೀಗ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ESPN Cricinfo ವರದಿ ಮಾಡಿದೆ. ಮಾರ್ಕ್​ವುಡ್ ವಿಶ್ವಕಪ್‌ನಲ್ಲಿ ಇದುವರೆಗೆ ನಾಲ್ಕು ಪಂದ್ಯಗಳನ್ನು ಆಡಿದ್ದು ಅದರಲ್ಲಿ ಒಂಬತ್ತು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಮಾರ್ಕ್​ವುಡ್ ವೇಗದ ಎಸೆತಗಳಿಗೆ ಹೆಸರುವಾಸಿಯಾಗಿದ್ದು, ಈ ಟೂರ್ನಿಯಲ್ಲಿ 154.74kph ವೇಗದಲ್ಲಿ ಬೌಲಿಂಗ್ ಮಾಡಿ ದಾಖಲೆ ನಿರ್ಮಿಸಿದ್ದಾರೆ. ಒಂದು ವೇಳೆ ಮಾರ್ಕ್​ವುಡ್ ಇಂದಿನ ಪಂದ್ಯದಲ್ಲಿ ಆಡದೇ ಇದ್ದರೆ ಇಂಗ್ಲೆಂಡ್ ತಂಡಕ್ಕೆ ದೊಡ್ಡ ಹೊಡೆತ ಬೀಳಲಿದೆ.

TV9 Kannada


Leave a Reply

Your email address will not be published.