IND vs ENG: ಭಾರತ- ಇಂಗ್ಲೆಂಡ್ ಸೆಮೀಸ್ ಕದನಕ್ಕೆ ಕ್ಷಣಗಣನೆ: ರೋಹಿತ್ ಪಡೆಯಿಂದ ಭರ್ಜರಿ ಅಭ್ಯಾಸ – Team India Practice for England clash in the second semifinal of the ICC men’s T20 World Cup 2022

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಪಂದ್ಯವು ಮಧ್ಯಾಹ್ನ 1:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ 1 ಗಂಟೆಗೆ ನಡೆಯಲಿದೆ. ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನಲ್‌ಗಳಲ್ಲಿ ನಡೆಯಲಿದೆ.

Nov 10, 2022 | 12:18 PM

TV9kannada Web Team

| Edited By: Vinay Bhat

Nov 10, 2022 | 12:18 PM

ಇಂದು ಅಡಿಲೇಡ್​ನ ಓವಲ್​ನಲ್ಲಿ ದ್ವಿತೀಯ ಸೆಮಿ ಫೈನಲ್ ಪಂದ್ಯ ಆಯೋಜಿಸಲಾಗಿದ್ದು ಭಾರತ ಹಾಗೂ ಇಂಗ್ಲೆಂಡ್ (India vs England) ತಂಡಗಳು ಮುಖಾಮುಖಿ ಆಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಟೀಮ್ ಎರಡನೇ ತಂಡವಾಗಿ ಫೈನಲ್ ತಲುಪಿ ಪಾಕ್ ವಿರುದ್ಧ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಇದಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ.

ಗೆಲ್ಲುವ ವಿಶ್ವಾಸದಲ್ಲಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಈಗಾಗಲೇ ನಾವು ಇಂಗ್ಲೆಂಡ್ ವಿರುದ್ಧ ಗೆದ್ದಿದ್ದೇವೆ ಎಂದಿದ್ದಾರೆ. ಭಾರತ ತಂಡ ಅಡಿಲೇಡ್​ನ ಓವಲ್​ ಮೈದಾನದಲ್ಲಿ ಆಡಿರುವ ಎರಡೂ ಪಂದ್ಯಗಳಲ್ಲಿ ಗೆದ್ದಿದೆ. ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶಕ್ಕೆ ಸೋಲುಣಿಸಿವೆ.

2014ರ ವಿಶ್ವಕಪ್ ಟೂರ್ನಿಯ ನಂತರ ಭಾರತ ತಂಡವು ಫೈನಲ್‌ ಪ್ರವೇಶಿಸಿಲ್ಲ. ಅಲ್ಲದೇ 2013ರ ನಂತರ ಯಾವುದೇ ಐಸಿಸಿ ಟ್ರೋಫಿಯನ್ನೂ ಜಯಿಸಿಲ್ಲ. ರೋಹಿತ್ ನಾಯಕತ್ವಕ್ಕೆ ಇದೊಂದು ಉತ್ತಮ ಅವಕಾಶವಾಗಿದೆ.

ಭಾರತದ ಪ್ರಮುಖ ಅಸ್ತ್ರ ಬ್ಯಾಟರ್​ಗಳೇ. ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಅಮೋಘ ಫಾರ್ಮ್​ನಲ್ಲಿದ್ದಾರೆ.

ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಹಾಗೂ ರಿಷಭ್ ಪಂತ್ ಅಥವಾ ದಿನೇಶ್ ಕಾರ್ತಿಕ್ ಪೈಕಿ ಯಾರಿಗೆ ಸ್ಥಾನ ಸಿಗುತ್ತೊ ಅವರು ಕೂಡ ಇಂದಿನ ಪಂದ್ಯದಲ್ಲಿ ಅಬ್ಬರಿಸಿದರೆ ಇಂಗ್ಲೆಂಡ್​ಗೆ ಸವಾಲಾಗುವುದು ಖಚಿತ.

ಈ ಬಾರಿಯ ಟೂರ್ನಿಯಲ್ಲಿ ಭಾರತದ ಬೌಲರ್​ಗಳು ಉತ್ತಮ ಆರಂಭ ಒದಗಿಸಿದ್ದಾರೆ. ಆದರೆ, ಮಧ್ಯಮ ಓವರ್ ಮತ್ತು ಡೆತ್ ಓವರ್​ನಲ್ಲಿ ಇನ್ನಷ್ಟು ಸುಧಾರಣೆಯ ಅಗತ್ಯ ಕಂಡಿತ ಇದೆ.

ಅಡಿಲೇಡ್ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ಅಚ್ಚುಮೆಚ್ಚು. ಬ್ಯಾಟ್​ಗೆ ಚೆಂಡು ನೇರವಾಗಿ ಸುಲಭವಾಗಿ ಬರುವ ಕಾರಣ ದೊಡ್ಡ ಮೊತ್ತದ ಪಂದ್ಯವನ್ನು ನಿರೀಕ್ಷಿಸಬಹುದಾಗಿದೆ. ಬೌಲರ್‌ಗಳು ಇಲ್ಲಿ ಕಠಿಣ ಸವಾಲನ್ನು ಎದುರಿಸಲಿದ್ದಾರೆ.

ಅಡಿಲೇಡ್ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ಅಚ್ಚುಮೆಚ್ಚು. ಬ್ಯಾಟ್​ಗೆ ಚೆಂಡು ನೇರವಾಗಿ ಸುಲಭವಾಗಿ ಬರುವ ಕಾರಣ ದೊಡ್ಡ ಮೊತ್ತದ ಪಂದ್ಯವನ್ನು ನಿರೀಕ್ಷಿಸಬಹುದಾಗಿದೆ. ಬೌಲರ್‌ಗಳು ಇಲ್ಲಿ ಕಠಿಣ ಸವಾಲನ್ನು ಎದುರಿಸಲಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಪಂದ್ಯವು ಮಧ್ಯಾಹ್ನ 1:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ 1 ಗಂಟೆಗೆ ನಡೆಯಲಿದೆ. ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನಲ್‌ಗಳಲ್ಲಿ ನಡೆಯಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಪಂದ್ಯವು ಮಧ್ಯಾಹ್ನ 1:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ 1 ಗಂಟೆಗೆ ನಡೆಯಲಿದೆ. ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನಲ್‌ಗಳಲ್ಲಿ ನಡೆಯಲಿದೆ.

Most Read StoriesTV9 Kannada

Leave a Reply

Your email address will not be published.