IND vs NZ: ಭಾರತ vs ನ್ಯೂಜಿಲೆಂಡ್: ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ | IND vs NZ: Hardik Pandya and Kane Williamson replacement in India and New Zealand Playing XI final for 1st T20)


IND vs NZ: ಭಾರತ vs ನ್ಯೂಜಿಲೆಂಡ್: ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ

IND vs NZ

ಬುಧವಾರ ಜೈಪುರದ ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಭಾರತ-ನ್ಯೂಜಿಲೆಂಡ್ ಮೊದಲ ಟಿ20 ಪಂದ್ಯವಾಡಲಿದೆ. ಈ ಪಂದ್ಯಕ್ಕೆ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಅಲಭ್ಯರಾದರೆ, ಇತ್ತ ಟೀಮ್ ಇಂಡಿಯಾ ಕೂಡ ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯಲಿದೆ. ಇನ್ನು ಈ ಪಂದ್ಯದೊಂದಿಗೆ ರೋಹಿತ್ ಶರ್ಮಾ ನಾಯಕನಾಗಿ ಹೊಸ ಇನಿಂಗ್ಸ್ ಆರಂಭಿಸಿದರೆ, ರಾಹುಲ್ ದ್ರಾವಿಡ್ ಟೀಮ್ ಇಂಡಿಯಾ ಕೋಚ್ ಆಗಿ ಮೊದಲ ಪಂದ್ಯದಲ್ಲೇ ಜಯದ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯಾರೆಲ್ಲಾ ಆಡಲಿದ್ದಾರೆ ಎಂಬ ನಿರೀಕ್ಷೆ ಕೂಡ ಹುಟ್ಟಿಕೊಂಡಿದೆ.

ನ್ಯೂಜಿಲೆಂಡ್ ತಂಡದಲ್ಲಿ ಕೇನ್ ವಿಲಿಯಮ್ಸನ್ ಬದಲಿಗೆ ಮಾರ್ಕ್ ಚಾಪ್ಮನ್ ಅವಕಾಶ ಪಡೆಯುವ ಸಾಧ್ಯತೆಯಿದೆ. ಒಂದು ವೇಳೆ ಗಾಯಗೊಂಡಿರುವ ಲಾಕಿ ಫರ್ಗುಸನ್ ಫಿಟ್ ಆದರೆ ಬೌಲಿಂಗ್ ವಿಭಾಗದಲ್ಲೂ ಬದಲಾವಣೆ ಕಾಣಬಹುದು. ಮತ್ತೊಂದೆಡೆ, ಭಾರತ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಬದಲಿಗೆ ವೆಂಕಟೇಶ್ ಅಯ್ಯರ್ ಪದಾರ್ಪಣೆ ಮಾಡುವ ಸಾಧ್ಯತೆಯಿದೆ. ಇದರ ಹೊರತಾಗಿ ತಂಡದಲ್ಲಿ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆ ತುಂಬಾ ಕಡಿಮೆ.

ಟಿ20 ವಿಶ್ವಕಪ್​ನಲ್ಲಿ ಆಡಿದ ಬಹುತೇಕ ಆಟಗಾರರು ತಂಡದಲ್ಲಿದ್ದು, ಹೀಗಾಗಿ ಅವರನ್ನೇ ರಾಹುಲ್ ದ್ರಾವಿಡ್ ಕಣಕ್ಕಿಳಿಸಬಹುದು. ಅದರಂತೆ ಆರಂಭಿಕರಾಗಿ ರೋಹಿತ್ ಮತ್ತು ರಾಹುಲ್ ಇನಿಂಗ್ಸ್ ಆರಂಭಿಸಬಹುದು. ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ಮತ್ತು ಶ್ರೇಯಸ್ ಅಯ್ಯರ್ ಮಧ್ಯಮ ಕ್ರಮಾಂಕದ ಪ್ರಬಲ ಆಧಾರ ಸ್ತಂಭವಾಗಲಿದ್ದಾರೆ. ತಂಡದಲ್ಲಿ ಇಬ್ಬರು ಸ್ಪಿನ್ನರ್‌ಗಳಾಗಿ ಅಶ್ವಿನ್ ಮತ್ತು ಚಹಲ್ ಇರಲಿದ್ದಾರೆ. ಹಾಗೆಯೇ ವೇಗಿಗಳಾಗಿ ಭುವನೇಶ್ವರ್ ಕುಮಾರ್​, ಹರ್ಷಲ್ ಪಟೇಲ್ ಮತ್ತು ಮೊಹಮ್ಮದ್ ಸಿರಾಜ್ ಅವಕಾಶ ಪಡೆಯಬಹುದು. ಇನ್ನು ಮೊದಲ ಪಂದ್ಯದಲ್ಲಿ ಇಶಾನ್ ಕಿಶನ್ ಹಾಗೂ ಶ್ರೇಯಸ್ ಅಯ್ಯರ್ ಕಣಕ್ಕಿಳಿದರೆ ರಿಷಭ್ ಪಂತ್​ಗೆ ಅವಕಾಶ ಕೈತಪ್ಪುವ ಸಾಧ್ಯತೆಯಿದೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿರಲಿದೆ:

ನ್ಯೂಜಿಲೆಂಡ್‌ನ ಪ್ಲೇಯಿಂಗ್ XI: ಮಾರ್ಟಿನ್ ಗಪ್ಟಿಲ್, ಡ್ಯಾರೆಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಜಿಮ್ಮಿ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ (ನಾಯಕ), ಟ್ರೆಂಟ್ ಬೌಲ್ಟ್, ಇಶ್ ಸೋಧಿ, ಕೈಲ್ ಜೇಮಿಸನ್

ಭಾರತದ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ಆರ್. ಅಶ್ವಿನ್, ಯುಜ್ವೇಂದ್ರ ಚಹಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್

ಇದನ್ನೂ ಓದಿ: T20 World Cup 2021: ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾಗೆ ಸಿಕ್ಕ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: T20 World Cup Winners: 7 ಟಿ20 ವಿಶ್ವಕಪ್​: ಚಾಂಪಿಯನ್​ ಪಟ್ಟಕ್ಕೇರಿದ 6 ತಂಡಗಳು

ಇದನ್ನೂ ಓದಿ:  Sourav Ganguly: ದ್ರಾವಿಡ್ ಅವರ ಮಗ ಕರೆ ಮಾಡಿ ಅಪ್ಪ ತುಂಬಾ ಕಟ್ಟುನಿಟ್ಟು, ನೀವು ಅವರನ್ನು ಕರ್ಕೊಂಡು ಹೋಗಿ ಎಂದರು..!

(IND vs NZ: Hardik Pandya and Kane Williamson replacement in India and New Zealand Playing XI final for 1st T20)

 

TV9 Kannada


Leave a Reply

Your email address will not be published. Required fields are marked *