IND vs NZ: ಮಳೆಯಿಂದ 3ನೇ ಟಿ20 ಪಂದ್ಯ ಡ್ರಾನಲ್ಲಿ ಅಂತ್ಯ; ಕಿವೀಸ್ ವಿರುದ್ಧ ಸರಣಿ ಗೆದ್ದ ಭಾರತ..! – IND vs NZ 3rd T20 Match Report Match tie due to rain India name series


ನ್ಯೂಜಿಲೆಂಡ್ ನಡುವಿನ ಮೂರನೇ ಮತ್ತು ಅಂತಿಮ ಟಿ20 ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ ಕಾರಣ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಇದರೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ಭಾರತ 1-0ಯಿಂದ ವಶಪಡಿಸಿಕೊಂಡಿದೆ. ಮಳೆಯಿಂದಾಗಿ ಸರಣಿಯ ಮೊದಲ ಪಂದ್ಯವನ್ನು ಆಡಲಾಗಲಿಲ್ಲ. ಇದಾದ ಬಳಿಕ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಸರಣಿಯಲ್ಲಿ ಮುನ್ನಡೆ ಸಾಧಿಸಿತ್ತು. ಮೂರನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆತಿಥೇಯರು 19.4 ಓವರ್‌ಗಳಲ್ಲಿ 160 ರನ್‌ಗಳಿಗೆ ಆಲೌಟ್ ಆಗಿದ್ದರು. ಈ ಗುರಿಯನ್ನು ಬೆನ್ನಟ್ಟಿದ ಭಾರತ ಒಂಬತ್ತು ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು 75 ರನ್ ಗಳಿಸಿತ್ತು. ಆದರೆ ಈ ನಂತರ ಮಳೆ ಬಂದ ಕಾರಣದಿಂದಾಗಿ ಪಂದ್ಯವನ್ನು ಆಡಲು ಸಾಧ್ಯವಾಗಲಿಲ್ಲ. ಹೀಗಾಗಿ ಅಂಪೈರ್‌ಗಳು ಪಂದ್ಯವನ್ನು ಟೈ ಎಂದು ಘೋಷಿಸಿದರು.

ತಾಜಾ ಸುದ್ದಿ

TV9 Kannada


Leave a Reply

Your email address will not be published.