India vs New Zealand
ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಆರಂಭವಾಗಿರುವ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಅಜಿಂಕ್ಯಾ ರಹಾನೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅಂದುಕೊಂಡಂತೆ ಭಾರತದಲ್ಲಿ ಮೂವರು ಸ್ಪಿನ್ನರ್ಗಳನ್ನು ಕಣಕ್ಕಿಳಿಸಲಾಗಿದೆ. ಜೊತೆಗೆ ಶ್ರೇಯಸ್ ಅಯ್ಯರ್ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದು, ಕ್ರಿಕೆಟ್ ದಿಗ್ಗಜ ಸುನೀಲ್ ಗವಾಸ್ಕರ್ ಕ್ಯಾಪ್ ಕೊಟ್ಟು ಆಹ್ವಾನಿಸಿದರು. ಕಾನ್ಪುರದ ಪಿಚ್ ಸ್ಪಿನ್ನರ್ಗಳಿಗೆ ಹೆಚ್ಚಿನ ನೆರವು ನೀಡಲಿದೆ. ಮೊದಲ ಎರಡು ದಿನ ಬ್ಯಾಟ್ಸ್ಮನ್ಗಳ ಪರವಾಗಿ ವರ್ತಿಸುವ ಸಾಧ್ಯತೆ ದಟ್ಟವಾಗಿದ್ದು, ಚಳಿಗಾಲವಾದ ಕಾರಣ ಆರಂಭಿಕ ಅವಧಿಯಲ್ಲಿ ವೇಗದ ಬೌಲರ್ಗಳಿಗೆ ನೆರವಾಗಬಹುದು. ಮೊದಲು ಬ್ಯಾಟ್ ಮಾಡಿರುವ ತಂಡಗಳೇ ಇಲ್ಲಿ ಹೆಚ್ಚಿನ ಗೆಲುವ ಸಾಧಿಸಿರುವ ಕಾರಣ ಟೀಮ್ ಇಂಡಿಯ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಭಾರತದ ಪ್ಲೇಯಿಂಗ್ XI:
ಶುಭ್ಮನ್ ಗಿಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಶ್ರೇಯಸ್ ಅಯ್ಯರ್, ಅಜಿಂಕ್ಯಾ ರಹಾನೆ (ನಾಯಕ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಇಶಾಂತ್ ಶರ್ಮಾ, ಉಮೇಶ್ ಯಾದವ್.
ಇನ್ನಷ್ಟು ಮಾಹಿತಿಗೆ ನಿರೀಕ್ಷಿಸಿ…