Rohit Sharma: ಇಂದೋರ್ನ ಹೋಲ್ಕರ್ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್ ತಮ್ಮ ವೃತ್ತಿ ಜೀವನದ 29 ಏಕದಿನ ಶತಕ ಸಿಡಿಸಿದರು.

ರೋಹಿತ್ ಶರ್ಮಾ
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬರೋಬ್ಬರಿ 1100 ದಿನಗಳ ಬಳಿಕ ಏಕದಿನದಲ್ಲಿ ಶತಕ ಸಿಡಿಸಿದ್ದಾರೆ. ಇಂದೋರ್ನ ಹೋಲ್ಕರ್ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್ ತಮ್ಮ ವೃತ್ತಿ ಜೀವನದ 29 ಏಕದಿನ ಶತಕ ಸಿಡಿಸಿದರು. ಬಹಳ ದಿನಗಳಿಂದ ರನ್ಗಾಗಿ ಪರದಾಡುತ್ತಿದ್ದ ರೋಹಿತ್, ಇಂದೋರ್ ಮೈದಾನದಲ್ಲಿ ಶತಕದ ಬರವನ್ನು ನೀಗಿಸಿಕೊಂಡಿದ್ದಾರೆ. ಕಾಕತಾಳೀಯವೆಂಬಂತೆ ರೋಹಿತ್ ಇದೇ ಮೈದಾನದಲ್ಲಿ ಟಿ20ಯಲ್ಲಿ ಶತಕ ಸಿಡಿಸಿದ್ದರು. ಒಂದೂವರೆ ವರ್ಷಗಳ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ರೋಹಿತ್ ಬಾರಿಸಿದ ಮೊದಲ ಶತಕ ಇದಾಗಿದೆ. ಈ ಮೊದಲು ಸೆಪ್ಟೆಂಬರ್ 2021 ರಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಶತಕ ಸಿಡಿಸಿದ್ದ ರೋಹಿತ್ ಅಂದಿನಿಂದ ಆಡಿರುವ 54 ಇನ್ನಿಂಗ್ಸ್ಗಳಲ್ಲಿ ಒಂದೇ ಒಂದು ಶತಕ ಸಿಡಿಸಿರಲಿಲ್ಲ. ತಮ್ಮ ಅಬ್ಬರದ ಇನ್ನಿಂಗ್ಸ್ನಲ್ಲಿ ಕೇವಲ 85 ಎಸೆತಗನ್ನು ಎದುರಿಸಿದ ರೋಹಿತ್ 9 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 101 ರನ್ ಸಿಡಿಸಿ ವಿಕೆಟ್ ಒಪ್ಪಿಸಿದ್ದಾರೆ.