IND vs SA: ಟಿ20 ಸರಣಿಗೆ ಆಯ್ಕೆಯಾದ ಬೆನ್ನಲ್ಲೇ ದಿನೇಶ್ ಕಾರ್ತಿಕ್ ಮಾಡಿದ ಟ್ವೀಟ್ ಏನು ನೋಡಿ | Dinesh Karthik has made it to the Indian squad for the T20I series against South Africa at home


IND vs SA: ಟಿ20 ಸರಣಿಗೆ ಆಯ್ಕೆಯಾದ ಬೆನ್ನಲ್ಲೇ ದಿನೇಶ್ ಕಾರ್ತಿಕ್ ಮಾಡಿದ ಟ್ವೀಟ್ ಏನು ನೋಡಿ

Dinesh Karthik IND vs SA Squad

Dinesh Karthik: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಬಿಸಿಸಿಐ ಟೀಮ್ ಇಂಡಿಯಾವನ್ನು ಪ್ರಕಟಿಸಿದೆ. ವಿಶೇಷ ಎಂದರೆ ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಫಿನಿಶರ್ ಆಗಿ ಬೊಂಬಾಟ್ ಪ್ರದರ್ಶನ ತೋರುತ್ತಿರುವ ದಿನೇಶ್ ಕಾರ್ತಿಕ್ ಮತ್ತೆ ಟೀಮ್ ಇಂಡಿಯಾಕ್ಕೆ ಆಯ್ಕೆಯಾಗಿದ್ದಾರೆ.

ಮುಂದಿನ ತಿಂಗಳು ಜೂನ್ 9 ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಟೀಮ್ ಇಂಡಿಯಾವನ್ನು ಪ್ರಕಟಿಸಿದೆ. ಅಂದುಕೊಂಡಂತೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು ಜೊತೆಗೆ ಕೆಲ ಅಚ್ಚರಿ ಆಯ್ಕೆಗಳು ಕೂಡ ನಡೆದಿದೆ. ಟೀಮ್ ಇಂಡಿಯಾ (Team India) ಖಾಯಂ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್​ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಕೆಎಲ್ ರಾಹುಲ್ ಅವರನ್ನು ಹಂಗಾಮಿ ನಾಯಕರಾಗಿ ಮತ್ತು ರಿಷಬ್ ಪಂತ್ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ವಿಶೇಷ ಎಂದರೆ ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಫಿನಿಶರ್ ಆಗಿ ಬೊಂಬಾಟ್ ಪ್ರದರ್ಶನ ತೋರುತ್ತಿರುವ ದಿನೇಶ್ ಕಾರ್ತಿಕ್ (Dinesh Karthik) ಮತ್ತೆ ಟೀಮ್ ಇಂಡಿಯಾಕ್ಕೆ ಆಯ್ಕೆಯಾಗಿದ್ದಾರೆ. ಬರೋಬ್ಬರಿ ಮೂರು ವರ್ಷಗಳ ನಂತರ ಕಾರ್ತಿಕ್​ಗೆ ಮತ್ತೆ ಅಂತರರಾಷ್ಟ್ರೀಯ ಕ್ರಿಕೆಟ್​ನ ಬಾಗಿಲು ತೆರೆದಿದ್ದು, ಟ್ವೀಟ್ ಮಾಡಿ ಸಂಭ್ರಮ ಹಂಚಿಕೊಂಡಿದ್ದಾರೆ.

ಬಿಸಿಸಿಐ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ತನ್ನನ್ನು ಆಯ್ಕೆ ಮಾಡುತ್ತಿದ್ದಂತೆ ಟ್ವೀಟ್ ಮಾಡಿರುವ ಕಾರ್ತಿಕ್, “ನೀವು ನಿಮ್ಮನ್ನು ನಂಬಿದರೆ, ಎಲ್ಲವೂ ಸರಿಯಾಗಿ ಸಾಗುತ್ತದೆ. ನಿಮ್ಮೆಲ್ಲರ ಬೆಂಬಲ ಮತ್ತು ನಂಬಿಕೆಗೆ ಧನ್ಯವಾದಗಳು… ಕಠಿಣ ಪರಿಶ್ರಮ ಮುಂದುವರಿಯುತ್ತದೆ…,” ಎಂದು ಬರೆದುಕೊಂಡಿದ್ದಾರೆ. ದಿನೇಶ್ ಕಾರ್ತಿಕ್ ಇದ್ದ ತಂಡದಲ್ಲೇ ರಿಷಭ್ ಪಂತ್ ಕೂಡ ಇದ್ದಾರೆ. ಇದರಿಂದ ಕಾರ್ತಿಕ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯುತ್ತಾರಾ ಎಂಬ ಅನುಮಾನ ಮೂಡಿದೆ. ಎಲ್ಲದರೂ ಅವಕಾಶ ಸಿಕ್ಕರೆ ಆ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಂಡರೆ ಟಿ20 ವಿಶ್ವಕಪ್​ನಲ್ಲಿ ಸ್ಥಾನ ಪಡೆಯುವುದು ಖಚಿತ.

ಉಳಿದಂತೆ ರುತುರಾಜ್‌ ಗಾಯಕ್ವಾಡ್‌ ಹಾಗೂ ಇಶಾನ್‌ ಕಿಶನ್‌ ಅವರು ಭಾರತ ತಂಡದಲ್ಲಿ ತಮ್ಮ ಸ್ಥಾನ ಪಡೆದಿದ್ದಾರೆ. ಇವರೊಂದಿಗೆ ಐಪಿಎಲ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾದ ಆಲ್ರೌಂಡರ್‌ ವೆಂಕಟೇಶ್‌ ಅಯ್ಯರ್‌ ಸಹ ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಶ್ರೇಯಸ್‌ ಅಯ್ಯರ್‌, ದೀಪಕ್‌ ಹೂಡ ಕೂಡ ಕಮ್​ಬ್ಯಾಕ್ ಮಾಡಿದ್ದಾರೆ. ಆವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್ ಆಯ್ಕೆಯಾಗಿದ್ದಾರೆ. ಜೂನ್ 9 ರಿಂದ ಆರಂಭಗೊಳ್ಳುವ ಮೊದಲ ಟಿ20 ಪಂದ್ಯವು ದೆಹಲಿಯಲ್ಲಿ ನಡೆಯಲಿದ್ದು, ಜೂನ್ 12 ಎರಡನೇ ಟಿ20 ಕಟಕ್, ಜೂನ್ 14 ಮೂರನೇ ಟಿ20 ವಿಶಾಖಪಟ್ಟಣಂ, ಜೂನ್ 17 ನಾಲ್ಕನೇ ಟಿ20 ರಾಜ್‌ಕೋಟ್‌, ಜೂನ್ 19 ಐದನೇ ಟಿ20 ಬೆಂಗಳೂರಿನಲ್ಲಿ ನಡೆಯಲಿದೆ.

IPL 2022: ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕಳಪೆ ಪ್ರದರ್ಶನಕ್ಕೆ ಇದುವೇ ಕಾರಣ

ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ:

ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪ ನಾಯಕ) (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಾಹಲ್, ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್ , ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.

ಟೆಸ್ಟ್​ಗೆ ಮರಳಿದ ಪೂಜಾರ:

ಚೇತೇಶ್ವರ್ ಪೂಜಾರ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಟೆಸ್ಟ್ ಗೆ ಮರಳಿದ್ದಾರೆ. ಅಜಿಂಕ್ಯಾ ರಹಾನೆ ಇಂಜುರಿಗೆ ತುತ್ತಾದ ಪರಿಣಾಮ ಹೊರಗುಳಿದಿದ್ದಾರೆ. ಇಂಗ್ಲೆಂಡ್ ಸರಣಿ ವೇಳೆ ಮುಂದೂಡಲಾಗಿದ್ದ ಒಂದು ಪಂದ್ಯ ಜುಲೈ ಮೊದಲ ವಾರ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಆಡಲಿದೆ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ್ ಪೂಜಾರ, ರಿಷಭ್ ಪಂತ್ (ವಿ.ಕೀ.), ಕೆಎಸ್ ಭರತ್ (ವಿ.ಕೀ.), ರವೀಂದ್ರ ಜಡೇಜಾ, ಆರ್.ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮದ್ ಶಮಿ, ಜಸ್​ಪ್ರೀತ್ ಬುಮ್ರಾ, ಮೊಹಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ ಕೃಷ್ಣ.

TV9 Kannada


Leave a Reply

Your email address will not be published. Required fields are marked *