IND vs SA: ಟೀಂ ಇಂಡಿಯಾದ ಟೆಸ್ಟ್ ನಾಯಕತ್ವ ವಹಿಸಿಕೊಳ್ಳಲು ನಾನು ಸಿದ್ಧ ಎಂದ ಬುಮ್ರಾ! ಬಿಸಿಸಿಐ ನಿಲುವೇನು? | Jasprit bumrah ready for test captaincy big statement before india vs south africa odi series


IND vs SA: ಟೀಂ ಇಂಡಿಯಾದ ಟೆಸ್ಟ್ ನಾಯಕತ್ವ ವಹಿಸಿಕೊಳ್ಳಲು ನಾನು ಸಿದ್ಧ ಎಂದ ಬುಮ್ರಾ! ಬಿಸಿಸಿಐ ನಿಲುವೇನು?

ಜಸ್ಪ್ರೀತ್ ಬುಮ್ರಾ

ವಿರಾಟ್ ಕೊಹ್ಲಿ ನಂತರ ಟೀಂ ಇಂಡಿಯಾದ ಟೆಸ್ಟ್ ನಾಯಕ ಯಾರು ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಏಕದಿನ ಮತ್ತು ಟಿ20 ನಂತರ ರೋಹಿತ್ ಶರ್ಮಾ ಟೆಸ್ಟ್ ತಂಡದ ನಾಯಕತ್ವ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ರೇಸ್‌ನಲ್ಲಿ ಇತರ ಆಟಗಾರರಾದ ಕೆಎಲ್ ರಾಹುಲ್, ರಿಷಭ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾ ಹೆಸರುಗಳೂ ಕಾಣಿಸಿಕೊಳ್ಳುತ್ತಿವೆ. ಸೋಮವಾರ, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಟೆಸ್ಟ್ ನಾಯಕನಾಗಲು ಸಿದ್ಧ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಏಕದಿನ ಸರಣಿಗೆ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರು ನಾಯಕತ್ವದ ಜವಾಬ್ದಾರಿಯನ್ನು ಪಡೆದರೆ ಅದಕ್ಕೆ ನಾನು ಸಂಪೂರ್ಣವಾಗಿ ಸಿದ್ಧ ಎಂದು ಹೇಳಿದರು.

ಜಸ್ಪ್ರೀತ್ ಬುಮ್ರಾ, ‘ನನಗೆ ಯಾವುದೇ ಜವಾಬ್ದಾರಿ ಸಿಕ್ಕರೂ ಅದನ್ನು ನಿಭಾಯಿಸಲು ಸಿದ್ಧನಿದ್ದೇನೆ. ಅವಕಾಶ ಸಿಕ್ಕರೆ ಅದೊಂದು ಗೌರವದಂತೆ. ಯಾವುದೇ ಪಾತ್ರವಾಗಿದ್ದರೂ ಯಾವುದೇ ಸಂದರ್ಭದಲ್ಲಿ ನಾನು ಕೊಡುಗೆ ನೀಡಲು ಬಯಸುತ್ತೇನೆ. ಜಸ್ಪ್ರೀತ್ ಬುಮ್ರಾ ODI ಉಪನಾಯಕನ ಪಾತ್ರವನ್ನು ಹೇಗೆ ನೋಡುತ್ತಿದ್ದಾರೆ ಎಂಬ ಪ್ರಶ್ನೆಗೆ ಭಾರತೀಯ ವೇಗದ ಬೌಲರ್ ತಮ್ಮದೇ ಶೈಲಿಯಲ್ಲಿ ಉತ್ತರಿಸಿದರು. ನಾನು ಉಪನಾಯಕನಾಗಿದ್ದೇನೆ ಆದರೆ ನನ್ನ ಪಾತ್ರ ಬದಲಾಗಿಲ್ಲ ಎಂದು ಬುಮ್ರಾ ಹೇಳಿದ್ದಾರೆ. ನಾಯಕ ಕೆಎಲ್ ರಾಹುಲ್​ಗೆ ನಾನು ಸಹಾಯ ಮಾಡುತ್ತೇನೆ. ಬೌಲಿಂಗ್ ಬದಲಾವಣೆ ಮಾಡಬಹುದೇ, ಪಂದ್ಯದಲ್ಲಿ ಏನು ಮಾಡಬಹುದು, ಈ ಎಲ್ಲಾ ಇನ್‌ಪುಟ್‌ಗಳನ್ನು ರಾಹುಲ್​ಗೆ ನೀಡುತ್ತೇನೆ. ಜೊತೆಗೆ ಉಪನಾಯಕ ಸ್ಥಾನಕ್ಕೆ ನನ್ನ ಮೇಲೆ ಯಾವುದೇ ಒತ್ತಡವಿಲ್ಲ ಎಂದಿದ್ದಾರೆ.

ರೋಹಿತ್ ಶರ್ಮಾ ಟೆಸ್ಟ್ ನಾಯಕನಾಗಲಿದ್ದಾರೆ!
ಜಸ್ಪ್ರೀತ್ ಬುಮ್ರಾ ಟೆಸ್ಟ್ ನಾಯಕತ್ವದ ಜವಾಬ್ದಾರಿ ನಿರ್ವಹಿಸುವೆ ಎಂದು ಹೇಳಿದ್ದರೂ ಸಹ ಮಾಧ್ಯಮ ವರದಿಗಳ ಪ್ರಕಾರ, ರೋಹಿತ್ ಶರ್ಮಾ ಟೆಸ್ಟ್ ತಂಡದ ನಾಯಕತ್ವವನ್ನು ಪಡೆಯಲಿದ್ದಾರೆ ಎಂದು ವರದಿಯಾಗಿದೆ. ಇನ್ಸೈಡ್ ಸ್ಪೋರ್ಟ್ ವರದಿಯ ಪ್ರಕಾರ, ಬಿಸಿಸಿಐ ರೋಹಿತ್ ಹೆಸರನ್ನು ಅಂತಿಮಗೊಳಿಸಿದೆ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ನಂತರ ಅವರ ಹೆಸರನ್ನು ಪ್ರಕಟಿಸಲಾಗುವುದು.

ಸಭೆಯಲ್ಲಿ ನಾಯಕತ್ವ ತೊರೆಯುವ ಬಗ್ಗೆ ವಿರಾಟ್ ಕೊಹ್ಲಿ ಹೇಳಿದ್ದಾರೆ
ನಾಯಕತ್ವ ತೊರೆಯುವ ಬಗ್ಗೆ ವಿರಾಟ್ ಕೊಹ್ಲಿ ತಂಡಕ್ಕೆ ಹೇಗೆ ಹೇಳಿದರು ಎಂದು ಜಸ್ಪ್ರೀತ್ ಬುಮ್ರಾ ಹೇಳಿದ್ದಾರೆ. ಕೇಪ್ ಟೌನ್‌ನಲ್ಲಿ ನಡೆದ ಪಂದ್ಯದ ನಂತರ ಟೀಮ್ ಮೀಟಿಂಗ್‌ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವವನ್ನು ತ್ಯಜಿಸುವುದಾಗಿ ಎಲ್ಲಾ ಆಟಗಾರರಿಗೆ ಹೇಳಿದ್ದರು ಎಂದು ಬುಮ್ರಾ ಹೇಳಿದ್ದಾರೆ. ಇದು ಅವರ ವೈಯಕ್ತಿಕ ನಿರ್ಧಾರವಾಗಿತ್ತು. ಅವರ ದೇಹ ಎಷ್ಟು ಸದೃಢವಾಗಿದೆ ಮತ್ತು ಮಾನಸಿಕವಾಗಿ ಎಷ್ಟು ಸಿದ್ಧವಾಗಿದೆ ಎಂಬುದು ಅವರಿಗೆ ತಿಳಿದಿದೆ. ವಿರಾಟ್ ಅವರ ಅತ್ಯುತ್ತಮ ಕೊಡುಗೆಗಾಗಿ ಎಲ್ಲಾ ಆಟಗಾರರು ಅಭಿನಂದಿಸಿದ್ದಾರೆ. ವಿರಾಟ್ ಕೊಹ್ಲಿ ತಂಡಕ್ಕೆ ಹೊಸ ಫಿಟ್ನೆಸ್ ಸಂಸ್ಕೃತಿ ತಂದರು. ಎಲ್ಲರೂ ಅವರ ನಾಯಕತ್ವವನ್ನು ಕಬ್ಬಿಣ ಎಂದು ಪರಿಗಣಿಸುತ್ತಾರೆ ಎಂದಿದ್ದಾರೆ.

TV9 Kannada


Leave a Reply

Your email address will not be published. Required fields are marked *