IND vs SA: ಡಿಕೆ, ಪಾಂಡ್ಯ ರಿ ಎಂಟ್ರಿ: ಹೇಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11 | IND vs SA: Predicted India Playing XI vs South Africa in 1st T20


IIndia Playing 11: ಮೂರನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡುವ ಸಾಧ್ಯತೆಯಿದೆ. ಈ ಹಿಂದೆ ನಾಲ್ಕನೇ ಕ್ರಮಾಂಕದಲ್ಲಿ ಆಡಿದ ಅನುಭವ ಹೊಂದಿರುವ ಅಯ್ಯರ್​ಗೆ ಈ ಬಾರಿ ಬಡ್ತಿ ನೀಡಬಹುದು.

India vs South Africa 1st T20: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಾಳೆ ನಡೆಯಲಿರುವ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಏಕೆಂದರೆ ಸತತ 12 ಪಂದ್ಯಗಳನ್ನು ಗೆದ್ದಿರುವ ಭಾರತ ತಂಡಕ್ಕೆ ವಿಶ್ವ ದಾಖಲೆ ಬರೆಯಲು ಒಂದು ಗೆಲುವಿನ ಅವಶ್ಯಕತೆಯಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಸತತವಾಗಿ 13 ಪಂದ್ಯ ಗೆದ್ದ ಮೊದಲ ತಂಡ ಎಂಬ ದಾಖಲೆ ಬರೆಯಲು ಟೀಮ್ ಇಂಡಿಯಾ ಸಜ್ಜಾಗಿದೆ. ಇದಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನೇ ಕಣಕ್ಕಿಳಿಸಲಿದೆ.

ಇಲ್ಲಿ ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ಇಶಾನ್ ಕಿಶನ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಏಕೆಂದರೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಎಡಗೈ-ಬಲಗೈ ಕಾಂಬಿನೇಷನ್​ನಲ್ಲಿ ಆರಂಭಿಕರನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚು. ಪ್ರಸ್ತುತ ತಂಡದಲ್ಲಿ ಎಡಗೈ ಆರಂಭಿಕನಾಗಿ ಇಶಾನ್ ಕಿಶನ್ ಇದ್ದು, ಹೀಗಾಗಿ ಕೆಎಲ್ ರಾಹುಲ್ ಜೊತೆ ಯುವ ಎಡಗೈ ದಾಂಡಿಗ ಇನಿಂಗ್ಸ್ ಆರಂಭಿಸಲಿದ್ದಾರೆ.

ಇನ್ನು ಮೂರನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡುವ ಸಾಧ್ಯತೆಯಿದೆ. ಈ ಹಿಂದೆ ನಾಲ್ಕನೇ ಕ್ರಮಾಂಕದಲ್ಲಿ ಆಡಿದ ಅನುಭವ ಹೊಂದಿರುವ ಅಯ್ಯರ್​ಗೆ ಈ ಬಾರಿ ಬಡ್ತಿ ನೀಡಬಹುದು. ಏಕೆಂದರೆ ಮಧ್ಯಮ ಕ್ರಮಾಂಕದಲ್ಲಿ ಅತ್ಯುತ್ತಮ ಆಟಗಾರರಿದ್ದಾರೆ.

4ನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಭ್ ಪಂತ್ ಕಾಣಿಸಿಕೊಂಡರೆ, 5ನೇ ಕ್ರಮಾಂಕದಲ್ಲಿ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಆಡಲಿದ್ದಾರೆ. ಇನ್ನು ಫಿನಿಶರ್ ಪಾತ್ರದಲ್ಲಿ ದಿನೇಶ್ ಕಾರ್ತಿಕ್ ಬ್ಯಾಟ್ ಬೀಸುವುದು ಬಹುತೇಕ ಖಚಿತ ಎನ್ನಬಹುದು. ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಡಿಕೆ ಆರ್​ಸಿಬಿ ಪರ ಅತ್ಯುತ್ತಮ ಫಾರ್ಮ್ ಪ್ರದರ್ಶಿಸಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ವಿರುದ್ದ ಮಹತ್ವದ ಪಂದ್ಯದಲ್ಲಿ ಅನುಭವಿ ದಿನೇಶ್ ಕಾರ್ತಿಕ್​​ಗೆ ಚಾನ್ಸ್ ನೀಡುವ ಸಾಧ್ಯತೆ ಹೆಚ್ಚು. ಇನ್ನು ಏಳನೇ ಕ್ರಮಾಂಕದಲ್ಲಿ ಸ್ಪಿನ್ ಆಲ್​ರೌಂಡರ್​ ಆಗಿ ಅಕ್ಷರ್ ಪಟೇಲ್ ಸ್ಥಾನ ಪಡೆಯಲಿದ್ದಾರೆ.

ಹಾಗೆಯೇ ಭುವನೇಶ್ವರ್ ಕುಮಾರ್ ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದು, ಅವರ ಜೊತೆಗೆ ಹರ್ಷಲ್ ಪಟೇಲ್ ಹಾಗೂ ಸ್ಪಿನ್ನರ್ ಯುಜುವೇಂದ್ರ ಚಹಲ್ ಸ್ಥಾನ ಪಡೆಯಲಿದ್ದಾರೆ. ಇದಾಗ್ಯೂ 3ನೇ ವೇಗಿಯಾಗಿ ಉಮ್ರಾನ್ ಮಲಿಕ್ ಅಥವಾ ಅವೇಶ್​ ಖಾನ್​ಗೆ ಸ್ಥಾನ ಸಿಗಬಹುದು. ಈ ಬಾರಿಯ ಐಪಿಎಲ್​ನಲ್ಲಿನ ಪ್ರದರ್ಶನವನ್ನು ಪರಿಗಣಿಸಿದರೆ ಉಮ್ರಾನ್ ಮಲಿಕ್​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಏಕೆಂದರೆ ಮಲಿಕ್ ಈ ಬಾರಿ ತಮ್ಮ ಮಾರಕ ವೇಗದ ಮೂಲಕ ಒಟ್ಟು 22 ವಿಕೆಟ್ ಉರುಳಿಸಿದ್ದಾರೆ. ಹೀಗಾಗಿ ಯುವ ವೇಗಿಗೆ ಮಣೆಹಾಕುವ ಸಾಧ್ಯತೆ ಹೆಚ್ಚು ಎನ್ನಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.

India Predicted Playing 11: ಕೆಎಲ್ ರಾಹುಲ್ (ನಾಯಕ), ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್ ಮತ್ತು ಉಮ್ರಾನ್ ಮಲಿಕ್.

ಟೀಮ್ ಇಂಡಿಯಾ ಸಂಪೂರ್ಣ ತಂಡ: ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ , ಅವೇಶ್ ಖಾನ್, ಅರ್ಷ್​ದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

TV9 Kannada


Leave a Reply

Your email address will not be published.