IND vs SA: ಫೈನಲ್ ಫೈಟ್​ಗೆ ಬೆಂಗಳೂರು ಸಿದ್ಧ; ಪೊಲೀಸ್ ಸರ್ಪಗಾವಲು, ಟ್ರಾಫಿಕ್ ತಪ್ಪಿಸಲು ಹತ್ತಕ್ಕೂ ಹೆಚ್ಚು ರಸ್ತೆಗಳಲ್ಲಿ ಸಂಚಾರ ಮಾರ್ಪಾಡು | Traffic jam around Chinnaswamy Stadium Due to india vs south africa 5th t20 match in bengaluru


IND vs SA: ಫೈನಲ್ ಫೈಟ್​ಗೆ ಬೆಂಗಳೂರು ಸಿದ್ಧ; ಪೊಲೀಸ್ ಸರ್ಪಗಾವಲು, ಟ್ರಾಫಿಕ್ ತಪ್ಪಿಸಲು ಹತ್ತಕ್ಕೂ ಹೆಚ್ಚು ರಸ್ತೆಗಳಲ್ಲಿ ಸಂಚಾರ ಮಾರ್ಪಾಡು

ಪ್ರಾತಿನಿಧಿಕ ಚಿತ್ರ

IND vs SA: ಸಂಜೆ ಏಳು ಗಂಟೆಗೆ ಪಂದ್ಯ ಆರಂಭವಾಗಲಿದೆ. ಬೆಂಗಳೂರಿನಲ್ಲಿ ಎರಡು ವರ್ಷಗಳ ನಂತರ ಅಂತರರಾಷ್ಟ್ರೀಯ ಪಂದ್ಯ ನಡೆಯುತ್ತಿದ್ದು, ಪಂದ್ಯ ವೀಕ್ಷಣೆಗೆ ಜನಸಾಗರವೇ ಹರಿದು ಬರುತ್ತಿದೆ. ಹೀಗಾಗಿ ಸ್ಟೇಡಿಯಂ ಸುತ್ತಮುತ್ತ ಭದ್ರತೆಗೆ ಒಂದು ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ (India and South Africa ) ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿ (five-match T20 series) ಇದೀಗ ರೋಚಕ ತಿರುವನ್ನು ತಲುಪಿದೆ. ಮೊದಲೆರಡು ಪಂದ್ಯಗಳಲ್ಲಿ ಸೋತ ನಂತರ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಸರಣಿಯನ್ನು 2-2ರಲ್ಲಿ ಸಮಬಲಗೊಳಿಸಿದೆ. ಇಂದು ಬೆಂಗಳೂರಿನಲ್ಲಿ ನಡೆಯಲಿರುವ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಐದನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಭಾರತದ ಯುವ ತಂಡ ತಮ್ಮ ದೌರ್ಬಲ್ಯಗಳನ್ನು ಮೆಟ್ಟಿ ನಿಂತು ಗೆಲುವು ದಾಖಲಿಸುವ ಉದ್ದೇಶದಿಂದ ತಂಡವಾಗಿ ಉತ್ತಮ ಪ್ರದರ್ಶನ ತೋರಲಿದೆ. ಇದಕ್ಕಾಗಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಕೂಡ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಇದರೊಂದಿಗೆ ಭಾರತ ತಂಡ ಇದುವರೆಗೆ ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ದ್ವಿಪಕ್ಷೀಯ T20I ಸರಣಿಯನ್ನು ಗೆದ್ದಿಲ್ಲದಿರುವುದು ಈ ಪಂದ್ಯಕ್ಕೆ ಮತ್ತಷ್ಟು ಹೈಪ್ ಕ್ರಿಯೆಟ್ ಮಾಡಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಲೂ ಹಬ್ಬದ ವಾತಾವರಣ

ಸಿಲಿಕಾನ್ ಸಿಟಿಯಲ್ಲಿ ಟಿ 20 ಕ್ರಿಕೆಟ್​ ಸರಣಿಯ ಫೈನಲ್​ ಪಂದ್ಯಕ್ಕೆ ಕೌಂಟ್​ಡೌನ್ ಶುರುವಾಗಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಲೂ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಸಂಜೆ ಏಳು ಗಂಟೆಗೆ ಪಂದ್ಯ ಆರಂಭವಾಗಲಿದೆ. ಬೆಂಗಳೂರಿನಲ್ಲಿ ಎರಡು ವರ್ಷಗಳ ನಂತರ ಅಂತರರಾಷ್ಟ್ರೀಯ ಪಂದ್ಯ ನಡೆಯುತ್ತಿದ್ದು, ಪಂದ್ಯ ವೀಕ್ಷಣೆಗೆ ಜನಸಾಗರವೇ ಹರಿದು ಬರುತ್ತಿದೆ. ಹೀಗಾಗಿ ಸ್ಟೇಡಿಯಂ ಸುತ್ತಮುತ್ತ ಭದ್ರತೆಗೆ ಒಂದು ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ.

TV9 Kannada


Leave a Reply

Your email address will not be published.