IND vs WI: ಭಾರತ ತನ್ನ ವೆಸ್ಟ್ ಇಂಡೀಸ್ ಪ್ರವಾಸವನ್ನು ಮತ್ತೊಂದು ಭರ್ಜರಿ ಗೆಲುವಿನೊಂದಿಗೆ ಕೊನೆಗೊಳಿಸಿದೆ. ಭಾರತ ಕ್ರಿಕೆಟ್ ತಂಡ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ತಂಡವನ್ನು 88 ರನ್ಗಳ ಬೃಹತ್ ಅಂತರದಿಂದ ಸೋಲಿಸಿದೆ.

ಭಾರತ ತನ್ನ ವೆಸ್ಟ್ ಇಂಡೀಸ್ ಪ್ರವಾಸವನ್ನು ಮತ್ತೊಂದು ಭರ್ಜರಿ ಗೆಲುವಿನೊಂದಿಗೆ ಕೊನೆಗೊಳಿಸಿದೆ. ಭಾರತ ಕ್ರಿಕೆಟ್ ತಂಡ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ತಂಡವನ್ನು 88 ರನ್ಗಳ ಬೃಹತ್ ಅಂತರದಿಂದ ಸೋಲಿಸಿದೆ. ಇದರೊಂದಿಗೆ ಟೀಂ ಇಂಡಿಯಾ 4-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಭಾರತೀಯ ಸ್ಪಿನ್ನರ್ಗಳು ತಮ್ಮ ಸಾಮರ್ಥ್ಯ ಪ್ರದರ್ಶಿಸಿ ಎಲ್ಲಾ 10 ವಿಕೆಟ್ಗಳನ್ನು ಕಬಳಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.