ಭಾರತ- ವಿಂಡೀಸ್ ಚುಟುಕು ಸಮರ
ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಟಿ20 ಸರಣಿಯ ಮೊದಲ ಪಂದ್ಯ ನಡೆಯುತ್ತಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡಿದ ನಂತರ, ಟೀಮ್ ಇಂಡಿಯಾ ಟಿ20 ಸರಣಿಯಲ್ಲೂ ಶುಭಾರಂಭ ಮಾಡಲು ನೋಡುತ್ತಿದೆ. ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದು, ಅವರ ಸ್ಥಾನಕ್ಕೆ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಅವರನ್ನು ಉಪನಾಯಕರನ್ನಾಗಿ ಮಾಡಲಾಗಿದೆ.
LIVE Cricket Score & Updates
-
16 Feb 2022 18:28 PM (IST)
ರವಿ ಬಿಷ್ಣೋಯ್ ಪಾದಾರ್ಪಣೆ
ಯುವ ಸ್ಪಿನ್ ಬೌಲರ್ ರವಿ ಬಿಷ್ಣೋಯ್ ಇಂದಿನ ಪಂದ್ಯದಲ್ಲಿ ಪದಾರ್ಪಣೆ ಮಾಡುವ ಅವಕಾಶ ಪಡೆದಿದ್ದಾರೆ. ತಂಡದ ಅನುಭವಿ ಬೌಲರ್ ಯುಜ್ವೇಂದ್ರ ಚಹಾಲ್ ರವಿ ಬಿಷ್ಣೋಯ್ಗೆ ಚೊಚ್ಚಲ ಕ್ಯಾಪ್ ನೀಡಿದ್ದಾರೆ.
-
16 Feb 2022 18:17 PM (IST)
ರಾಹುಲ್ ಅಲಭ್ಯ
ತಂಡದ ಉಪನಾಯಕ ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದಾಗಿ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ರಿಷಬ್ ಪಂತ್ ಅವರನ್ನು ಉಪನಾಯಕರನ್ನಾಗಿ ಮಾಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮೊದಲ ಪಂದ್ಯದಲ್ಲಿ ಇಶಾನ್ ಕಿಶನ್ ರೋಹಿತ್ ಶರ್ಮಾ ಜೊತೆ ಓಪನರ್ ಆಗಿ ಬರಬಹುದು.